Advertisement

ರೈತರಿಗೆ ಸಮರ್ಪಕ ವಿದ್ಯುತ್‌ ಪೂರೈಕೆಗೆ ಒತ್ತಾಯಿಸಿ ಮನವಿ

04:05 PM Jan 20, 2020 | Suhan S |

ಹಿರೇಕೆರೂರ: ರೈತರ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ 12 ಗಂಟೆ 3 ಫೇಸ್‌ ವಿದ್ಯುತ್‌ಪೂರೈಸಬೇಕು ಎಂದು ಉತ್ತರ ಕರ್ನಾಟಕ ರೈತ ಸಂಘದಿಂದ ಹುಬ್ಬಳ್ಳಿಯಲ್ಲಿಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

Advertisement

ವಿಪರೀತ ಮಳೆಯಿಂದ ಮುಂಗಾರು ಹಂಗಾಮಿನಲ್ಲಿ ರೈತರ ಬೆಳೆ ಹಾನಿಯಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಭಾರಿ ಮಳೆಯಿಂದ ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.ಬೇಸಿಗೆಯಲ್ಲಿ ಸಮರ್ಪಕವಾಗಿ ವಿದ್ಯುತ್‌ ಪೂರೈಕೆ ಮಾಡಿದರೆ ರೈತರಿಗೆಅನುಕೂಲವಾಗುತ್ತದೆ. ಆದ್ದರಿಂದ ಪಂಪ್‌ ಸೆಟ್‌ ಗಳಿಗೆ ಹಗಲು ಹೊತ್ತಿನಲ್ಲಿ 12 ಗಂಟೆ 3 ಫೇಸ್‌ ವಿದ್ಯುತ್‌ ಪೂರೈಸಬೇಕು. ಹಿರೇಕೆರೂರ-ರಟ್ಟಿಹಳ್ಳಿ ತಾಲೂಕುಗಳಲ್ಲಿ ಇರುವ 33 ಕೆ.ವಿ. ವಿದ್ಯುತ್‌ ವಿತರಣಾ ಕೇಂದ್ರಗಳ ಸಾಮರ್ಥ್ಯವನ್ನು 110 ಕೆ.ವಿ.ಗೆ ಹೆಚ್ಚಿಸಬೇಕು ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ ದೂದೀಹಳ್ಳಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲನಗೌಡ ಸೊರಟೂರ, ಈರಪ್ಪಮಳವಳ್ಳಿ, ವಿಜಯಕುಮಾರ ಕೋಣನತಲೆ ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next