Advertisement

ಕೊರ್ಲಗುಂದಿ ಗ್ರಾಮಕ್ಕೆ ಸಮರ್ಪಕವಾಗಿ ಬಸ್‌ ಓಡಿಸಿ

12:42 PM Aug 04, 2019 | Suhan S |

ಬಳ್ಳಾರಿ: ತಾಲೂಕಿನ ಕೊರ್ಲಗುಂದಿ ಗ್ರಾಮಕ್ಕೆ ಸಮರ್ಪಕ ಸಾರಿಗೆ ಬಸ್‌ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನಗರದ ಸಾರಿಗೆ ಇಲಾಖೆ ವಿಭಾಗೀಯ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

Advertisement

ತಾಲೂಕಿನ ಕೊರ್ಲಗುಂದಿ ಗ್ರಾಮವು ಬಳ್ಳಾರಿ ನಗರದಿಂದ ಕೇವಲ 15 ಕಿಮೀ ದೂರದಲ್ಲಿದೆ. ಗ್ರಾಮದಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಸ್‌ಪಾಸ್‌ ಸೌಲಭ್ಯ ಹೊಂದಿದ್ದಾರೆ. ಆದರೆ, ಗ್ರಾಮಕ್ಕೆ ಕೇವಲ ಒಂದೇ ಬಸ್‌ನ್ನು ಓಡಿಸುವುದರಿಂದ ಪ್ರತಿದಿನ ವಿದ್ಯಾಭ್ಯಾಸಕ್ಕೆಂದು ನಗರಕ್ಕೆ ಆಗಮಿಸುವ ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅವರ ಸಂಖ್ಯೆಗನುಗುಣವಾಗಿ ಗ್ರಾಮಕ್ಕೆ ಬಸ್‌ ಸೌಲಭ್ಯ ಒದಗಿಸಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.

ಬಳ್ಳಾರಿ ನಗರದಿಂದ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್‌ ಸಹ ಸಮಯಕ್ಕೆ ಸರಿಯಾಗಿ ಸಂಚರಿಸುತ್ತಿಲ್ಲ. ಒಂದೇ ಬಸ್‌ನಲ್ಲಿ ನೂರಾರು ವಿದ್ಯಾರ್ಥಿಗಳು ಸಹ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಪರಿಣಾಮ ಬಸ್‌ಪಾಸ್‌ ಇದ್ದರೂ, ಖಾಸಗಿ ಆಟೋಗಳಲ್ಲಿ ಹಣ ನೀಡಿ ಪ್ರಯಾಣಿಸಬೇಕಾಗಿದೆ. ಆದ್ದರಿಂದ ಪ್ರತಿದಿನ ಬೆಳಗ್ಗೆ 8 ಗಂಟೆಗೆ ಕೊರ್ಲಗುಂದಿ ಗ್ರಾಮದಿಂದ ಬಳ್ಳಾರಿಗೆ ಎರಡು ಬಸ್‌ ಮತ್ತು ಮಧ್ಯಾಹ್ನ 2 ಗಂಟೆಗೆ, ಸಂಜೆ 4 ಗಂಟೆಗೆ ಬಳ್ಳಾರಿಯಿಂದ ಕೊರ್ಲಗುಂದಿಗೆ ಬಸ್‌ನ್ನು ಓಡಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಮುಂದಿನ ವಾರ ಆಗಸ್ಟ್‌ 6ನೇ ತಾರೀಖೀನೊಳಗಾಗಿ ಮೇಲಿನ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಜಿ.ಸುರೇಶ್‌, ಜಿಲ್ಲಾ ಉಪಾಧ್ಯಕ್ಷ ಗುರಳ್ಳಿರಾಜ, ಜಿಲ್ಲಾ ಕಾರ್ಯದರ್ಶಿ ರವಿಕಿರಣ್‌, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ನಿಂಗರಾಜ್‌, ಗ್ರಾಮದ ವಿದ್ಯಾರ್ಥಿಗಳಾದ ಸೋಮು, ರಮೇಶ್‌, ಎಐಡಿಎಸ್‌ಒ ಸದಸ್ಯರಾದ ರವಿ, ಶಿವಾಜಿ, ಬಾಲಾಜಿ, ಬಸವರಾಜ್‌, ವೀರಭದ್ರ, ಶಿವಶಂಕರ್‌ಗೌಡ ಸೇರಿದಂತೆ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next