Advertisement

ಕಬ್ಬು ಕಟಾವು, ಸಾಗಣೆ ವೆಚ್ಚ ಕಡಿತಕ್ಕೆ ಸಮಿತಿ ರಚನೆ: ಮುನೇನಕೊಪ್ಪ

09:52 PM Dec 12, 2022 | Team Udayavani |

ಬೆಂಗಳೂರು: ಕಬ್ಬಿನ ಕಟಾವು ಮತ್ತು ಸಾಗಣೆ ವೆಚ್ಚ ಕಡಿತದ ಕುರಿತಂತೆ ಒಂದು ತಿಂಗಳಲ್ಲಿ ಸಮಿತಿ ರಚಿಸಿ ವರದಿ ಪಡೆಯಲಾಗುವುದು. ಅದರ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ಹೇಳಿದರು.

Advertisement

ರಾಜ್ಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶಗಳನ್ನು ಕಬ್ಬು ಬೆಳೆಗಾರರಿಗೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಮೊದಲ ಕಂತಿನಲ್ಲಿ ತಲಾ 50 ರೂ.ನಂತೆ 202 ಕೋಟಿ ರೂ.ಗಳನ್ನು ರೈತರ ಖಾತೆಗೆ ಹಾಕಲು ನಿರ್ಧರಿಸಲಾಗಿದೆ. ಹೀಗೆ ಲಾಭಾಂಶ ನೀಡುತ್ತಿರುವ ರಾಜ್ಯಗಳಲ್ಲಿ ಉತ್ತರಪ್ರದೇಶ, ಮಹಾರಾಷ್ಟ್ರದ ಬಳಿಕ ಕರ್ನಾಟಕ ಮೂರನೇ ರಾಜ್ಯವಾಗಿದೆ ಎಂದರು.

ಕಬ್ಬು ಬೆಳೆಗಾರರಿಗೆ ನೀಡಬೇಕಿದ್ದ 19,624 ಕೋಟಿ ರೂ. ಅನ್ನು ಈಗಾಗಲೆ ಪಾವತಿಸಲಾಗಿದೆ. ಮೈಶುಗರ್‌ ಸಹಿತ ಎಲ್ಲ ಕಾರ್ಖಾನೆಗಳ ಪುನಃಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಕಬ್ಬಿನ ಉಪ ಉತ್ಪನ್ನವಾದ ಎಥೆನಾಲ್‌ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸಲಾಗಿದೆ. ಅದಕ್ಕಾಗಿ ಹೊಸ ಎಥೆನಾಲ್‌ ನೀತಿ ಜಾರಿಗೆ ಇಲಾಖೆ ಮುಂದಾಗಿದೆ.

44 ಸಕ್ಕರೆ ಕಾರ್ಖಾನೆಗಳಿಂದ ಎಥೆನಾಲ್‌ ಉತ್ಪಾದನೆಗೆ ಅರ್ಜಿ ಬಂದಿವೆ. ಕಳೆದ ಬಾರಿ 6.22 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ಅರೆಯಲಾಗಿದ್ದು, ಈ ಬಾರಿ ಆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next