Advertisement

Kukke ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪುತ್ತಿಗೆ ಯತಿದ್ವಯರ ಭೇಟಿ

12:57 AM Jan 11, 2024 | Team Udayavani |

ಸುಬ್ರಹ್ಮಣ್ಯ: ಶ್ರೀ ಜಗದ್ಗುರು ಮಧ್ವಾಚಾರ್ಯ ಸಂಸ್ಥಾನ ಭಾವೀ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಶಿಷ್ಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಬುಧವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಅವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.

Advertisement

ಶ್ರೀಗಳು ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ ರಾಂ ಸುಳ್ಳಿ, ಸದಸ್ಯೆ ವನಜಾ ವಿ.ಭಟ್‌ ಉಪಸ್ಥಿತರಿದ್ದರು.

ಮಠಕ್ಕೆ ಭೇಟಿ: ಬಳಿಕ ಶ್ರೀಗಳು ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದ ರೊಂದಿಗೆ ಶ್ರೀ ಸಂಪುಟ ನರಸಿಂಹ ದೇವರ ದರ್ಶನ ಪಡೆದು ಮಠಕ್ಕೆ ಆಗಮಿಸಿದರು. ಅಲ್ಲಿ ತೊಟ್ಟಿಲು ಪೂಜೆ ನೆರವೇರಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next