Advertisement

ವಿವಾಹಿತ ಪುರುಷರ ಆತ್ಮಹತ್ಯೆ; ”ಪುರುಷರ ಆಯೋಗ”ಕೋರಿ ಸುಪ್ರೀಂನಲ್ಲಿ ಅರ್ಜಿ

06:59 PM Mar 15, 2023 | Team Udayavani |

ನವದೆಹಲಿ : ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾದ ವಿವಾಹಿತ ಪುರುಷರ ಆತ್ಮಹತ್ಯೆಯನ್ನು ಎದುರಿಸಲು ಮಾರ್ಗಸೂಚಿಗಳನ್ನು ಮತ್ತು ‘ರಾಷ್ಟ್ರೀಯ ಪುರುಷರ ಆಯೋಗ’ವನ್ನು ರಚಿಸಲು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

Advertisement

ವಕೀಲ ಮಹೇಶ್ ಕುಮಾರ್ ತಿವಾರಿ ಅವರು ಸಲ್ಲಿಸಿದ ಮನವಿಯಲ್ಲಿ 2021 ರಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಭಾರತದಲ್ಲಿ ಆಕಸ್ಮಿಕ ಸಾವುಗಳ ಕುರಿತು ಪ್ರಕಟಿಸಿದ ಡೇಟಾವನ್ನು ಉಲ್ಲೇಖಿಸಿ, ಆ ವರ್ಷದಲ್ಲಿ ದೇಶಾದ್ಯಂತ 1,64,033 ಜನರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ,ಇವರಲ್ಲಿ 81,063 ಮಂದಿ ವಿವಾಹಿತ ಪುರುಷರು, 28,680 ವಿವಾಹಿತ ಮಹಿಳೆಯರು ಎಂದು ತಿಳಿಸಲಾಗಿದೆ.

2021 ರಲ್ಲಿ 33.2 ಪ್ರತಿಶತ ಪುರುಷರು ಕೌಟುಂಬಿಕ ಸಮಸ್ಯೆಗಳಿಂದಾಗಿ ಮತ್ತು 4.8 ಪ್ರತಿಶತದಷ್ಟು ವಿವಾಹ ಸಂಬಂಧಿತ ಸಮಸ್ಯೆಗಳಿಂದಾಗಿ ತಮ್ಮ ಜೀವನವನ್ನು ಕೊನೆಗೊಳಿಸಿದ್ದಾರೆ. ಈ ವರ್ಷದಲ್ಲಿ ಒಟ್ಟು 1,18,979 ಪುರುಷರು (ಶೇ 72) ಮತ್ತು ಒಟ್ಟು 45,026 ಮಹಿಳೆಯರು (ಶೇ 27) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಎನ್‌ಸಿಆರ್‌ಬಿ ಒದಗಿಸಿದ ದತ್ತಾಂಶವನ್ನು ಉಲ್ಲೇಖಿಸಿ ಮನವಿಯಲ್ಲಿ ತಿಳಿಸಲಾಗಿದೆ.

ವಿವಾಹಿತ ಪುರುಷರ ಆತ್ಮಹತ್ಯೆಯ ಸಮಸ್ಯೆಯನ್ನು ನಿಭಾಯಿಸಲು ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಪುರುಷರ ದೂರುಗಳನ್ನು ಸ್ವೀಕರಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನಿರ್ದೇಶನವನ್ನು ಅರ್ಜಿಯಲ್ಲಿ ಕೋರಲಾಗಿದೆ.

ಕೌಟುಂಬಿಕ ಹಿಂಸಾಚಾರ ಅಥವಾ ಕೌಟುಂಬಿಕ ಸಮಸ್ಯೆ ಮತ್ತು ವಿವಾಹ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವಿವಾಹಿತ ಪುರುಷರ ಆತ್ಮಹತ್ಯೆಯ ವಿಷಯದ ಕುರಿತು ಸಂಶೋಧನೆ ನಡೆಸಲು ಮತ್ತು ರಾಷ್ಟ್ರೀಯ ರೀತಿಯ ವೇದಿಕೆಯನ್ನು ರಚಿಸುವ ಸಲುವಾಗಿ ಅಗತ್ಯ ವರದಿಯನ್ನು ಮಾಡಲು ಭಾರತೀಯ ಕಾನೂನು ಆಯೋಗಕ್ಕೆ ನಿರ್ದೇಶನ/ಶಿಫಾರಸನ್ನು ನೀಡಿ, ಪುರುಷರಿಗಾಗಿ ಆಯೋಗ ರಚಿಸಬೇಕು ಎಂದು ಮನವಿ ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next