Advertisement

Politics: ಸರಕಾರದಿಂದ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ: ಬಿ.ಸಿ.ಪಾಟೀಲ್‌

11:50 PM Oct 11, 2023 | Team Udayavani |

ಬೆಂಗಳೂರು: ಕರ್ನಾಟಕ ಸರಕಾರ ರಾಜ್ಯದ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುತ್ತಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದು, ಬರದ ಸಂದರ್ಭದಲ್ಲೂ ರೈತರಿಗೆ ವಿದ್ಯುತ್‌ ಪೂರೈಸದೇ ಸತಾಯಿಸುತ್ತಿದೆ ಎಂದು ಆರೋಪಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್‌ ಆಡಳಿತದಲ್ಲಿದ್ದಾಗಲೇ ರೈತರ ಆತ್ಮಹತ್ಯೆ ಪ್ರಮಾಣ ಹೆಚ್ಚಾಗುತ್ತದೆ. 2015-16ರಲ್ಲಿ ಕಾಂಗ್ರೆಸ್‌ ಆಡಳಿತ ನಡೆಸುತ್ತಿದ್ದಾಗ 1,525 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. 16-17ರಲ್ಲಿ 1,203 ರೈತರು, 17-18ರಲ್ಲಿ 1,320 ರೈತರು ಆತ್ಮಹತ್ಯೆಗೆ ಶರಣಾಗಿದ್ದರು. ಸರಕಾರ ಬದಲಾದ ಅನಂತರ 2018-19ರಲ್ಲಿ ಈ ಪ್ರಮಾಣ 1,085ಕ್ಕೆ ಇಳಿಯಿತು. 2019-2020ರಲ್ಲಿ 1,091, 2020-21ರಲ್ಲಿ 855, 2021-22ರಲ್ಲಿ 963 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ ಈ ವರ್ಷ ಸಪ್ಟೆಂಬರ್‌ ಅಂತ್ಯದ ವೇಳೆಗೆ 900 ರೈತರ ಆತ್ಮಹತ್ಯೆ ಆಗಿದೆ. ಕಾಂಗ್ರೆಸ್‌ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರ ನಿರ್ವಹಣೆಯಲ್ಲಿ ಸರಕಾರ ವಿಫ‌ಲವಾಗಿದೆ. 11,527 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಆದರೆ ರಾಜ್ಯ ಸರಕಾರ ಇದುವರೆಗೂ ಒಂದು ಪೈಸೆ ಬೆಳೆ ಪರಿಹಾರ ನೀಡಿಲ್ಲ. ನಾವು ಅಧಿಕಾರದಲ್ಲಿದ್ದಾಗ ಕೇಂದ್ರ ಪರಿಹಾರ ಕೊಡಲಿ ಎಂದು ಕಾಯಲಿಲ್ಲ. ಆದರೆ ಇವರು ಕೇಂದ್ರ ಸರಕಾರದತ್ತ ಬೊಟ್ಟು ಮಾಡುತ್ತಿದ್ದಾರೆ. ಇದುವರೆಗೆ ಒಬ್ಬ ಸಚಿವನೂ ರೈತರ ಭೂಮಿಗೆ ಭೇಟಿ ಕೊಟ್ಟಿಲ್ಲ ಎಂದರು.

ಲಿಂಗಾಯತರ ಅವಗಣನೆ ಸತ್ಯ
ಕಾಂಗ್ರೆಸ್‌ನಲ್ಲಿ ಲಿಂಗಾಯತರ ಅವಗಣನೆಯಾಗುತ್ತಿರುವುದು ನೂರಕ್ಕೆ ನೂರು ಸತ್ಯ. ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ನಿಜ. ಯಾರಾದರೂ ಲಿಂಗಾಯತರು ಪೋಸ್ಟಿಂಗ್‌ ಕೇಳಿಕೊಂಡು ಬಂದರೆ ಕೊಡಬೇಡಿ ಎಂದು ಮುಖ್ಯಮಂತ್ರಿ ಕಡೆಯಿಂದ ನೇರವಾಗಿ ಸಚಿವರಿಗೆ ಕರೆ ಹೋಗಿದೆ ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next