Advertisement

ಸುಳ್ಯ: ಲಾಡ್ಜ್ ನಲ್ಲಿ ಯುವಕ, ಯುವತಿ ಆತ್ಮಹತ್ಯೆ

09:21 PM Oct 19, 2020 | mahesh |

ಸುಳ್ಯ: ನಗರದ ವಸತಿಗೃಹವೊಂದರಲ್ಲಿ ಯುವಕ ಹಾಗೂ ಯುವತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅ. 19ರ ಮಧ್ಯಾಹ್ನ ಬೆಳಕಿಗೆ ಬಂದಿದೆ

Advertisement

ಆತ್ಮಹತ್ಯೆಗೆ ಶರಣಾದ ಯುವಕನನ್ನು ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಎಂದು ತಿಳಿದು ಬಂದಿದೆ. ಯುವತಿ ಬೆಳ್ತಂಗಡಿ ನಿವಾಸಿ ಎಂದು ಹೇಳಲಾಗುತ್ತಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿರುವ ಯುವಕ ಹಾಗೂ ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next