ಚಂಡೀಗಢ: ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಂದ ತೆರವಾಗಿದ್ದ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಚರಣಜಿತ್ ಸಿಂಗ್ ಛನ್ನಿ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಹೊಸ ಸಿಎಂ ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮತ್ತು ಕ್ಯಾಪ್ಟನ್ ಅಮರೀಂದರ್ ಸಿಂಗ್ ಆಂತರಿಕ ಕಚ್ಚಾಟದ ಪರಿಣಾಮ ಕ್ಯಾಪ್ಟನ್ ಶನಿವಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಮಾಜಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಜಾಖರ್, ಪ್ರಸ್ತುತ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಪಕ್ಷದ ಹಿರಿಯ ನಾಯಕರಾದ ಅಂಬಿಕಾ ಸೋನಿ, ರಾಜಿಂದರ್ ಸಿಂಗ್ ಬಾಜ್ವಾ, ಬ್ರಹ್ಮ ಮೊಹಿಂದ್ರಾ, ವಿಜಯ್ ಇಂದರ್ ಸಿಂಗ್ಲಾ, ಪಂಜಾಬ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕುಲ್ಜಿತ್ ಸಿಂಗ್ ನಾಗ್ರಾ ಮತ್ತು ಸಂಸದ ಪರ್ತಾಪ್ ಸಿಂಗ್ ಬಾಜ್ವಾ ಮುಂತಾದವರು ಸಿಎಂ ರೇಸ್ ನಲ್ಲಿದ್ದರು.ಆದರೆ, ಕೊನೆಯ ಕ್ಷಣದಲ್ಲಿ ಅಚ್ಚರಿಯ ಆಯ್ಕೆ ನಡೆದಿದ್ದು, ಚರಣಜಿತ್ ಸಿಂಗ್ ಛನ್ನಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದಿದೆ.