ಮಂಗಳೂರು: ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಹಾಲಕ್ಕಿ ಬುಡಕಟ್ಟು ಸಮುದಾಯದ ಹೋರಾಟಗಾರ್ತಿ, ಹಿರಿಯ ಜಾನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
Advertisement
ತಲೆ ಸುತ್ತು, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಹೊನ್ನಾವರದ ಆಸ್ಪತ್ರೆಯಲ್ಲಿ ಪರೀಕ್ಷಿಸಿ, ಅಲ್ಲಿನ ವೈದ್ಯರ ಸಲಹೆಯ ಮೇರೆಗೆ ಮಂಗಳೂರಿಗೆ ಕರೆತರಲಾಗಿತ್ತು.
ಸುಕ್ರಿ ಅವರ ಹೃದಯದ ರಕ್ತನಾಳದಲ್ಲಿ ಬ್ಲಾಕ್ ಕಂಡು ಬಂದ ಹಿನ್ನೆಲೆಯಲ್ಲಿ ಸ್ಟಂಟ್ ಅಳವಡಿಸಲಾಗಿದೆ. ರವಿವಾರ ಹೃದಯದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.