ರಾಮನಗರ: ವಾಟರ್ ಫಿಲ್ಟರ್ ಗೆ ಬಳಸಬೇಕಿದ್ದ ಸಲ್ಪರ್ ಆ್ಯಸೀಡ್ ಪೈಪ್ ಲೀಕ್ ಆಗಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ರಾಮನಗರ ಐಜೂರಿನ ಮಲ್ಲೇಶ್ವರ ಬಡಾವಣೆಯಲ್ಲಿ ಸಂಭವಿಸಿದೆ.
ಅಸ್ವಸ್ಥರಾಗಿದ್ದವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
2004 ರಿಂದ ತುಕ್ಕು ಹಿಡಿದು ಬಿದ್ದಿದ್ದ ಪೈಪ್ ನಿಂದ ಗ್ಯಾಸ್ ಸೋರಿಕೆಯಾಗಿದ್ದು ಇದರ ಪರಿಣಾಮ ಹಲವು ಮಂದಿ ಅಸ್ವಸ್ಥಗೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ತಂಡ ಧಾವಿಸಿ ಪರಿಶೀಲನೆ ನಡೆಸುತ್ತಿದೆ.
ಸಣ್ಣ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿರುವುದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ: Ashok Chavan: ಕೈ ತೊರೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್.. ಮುಂದಿನ ನಡೆ..?