Advertisement

Sullia: ಬೈಕ್‌ ಢಿಕ್ಕಿ- ಪಾದಚಾರಿ ಸಾವು

11:38 PM Dec 28, 2023 | Team Udayavani |

ಸುಳ್ಯ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್‌ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಡಿ. 28ರಂದು ಜಾಲ್ಸೂರಿನಲ್ಲಿ ಮಧ್ಯಾಹ್ನ ಸಂಭವಿಸಿದೆ.

Advertisement

ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ (71) ಮೃತರು. ಇವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಪುರುಷೋತ್ತಮ ಅವರು ಜಾಲ್ಸೂರಿನ ಅರಣ್ಯ ತಪಾಸಣ ಚೆಕ್‌ಪೋಸ್ಟ್‌ ಬಳಿ ಮುಖ್ಯರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪುತ್ತೂರು ಕಡೆಯಿಂದ ಬಂದ ಬೈಕ್‌ ಅವರಿಗೆ ಢಿಕ್ಕಿ ಹೊಡೆದಿದ್ದು, ಘಟನೆಯಿಂದ ತಲೆಗೆ ಗಂಭೀರ ಗಾಯಗೊಂಡ ಅವರನ್ನು ತತ್‌ಕ್ಷಣ ಸ್ಥಳೀಯರು ಸುಳ್ಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next