ಸುಳ್ಯ: ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸುಳ್ಯ ಸಮೀಪದ ಜಾಲ್ಸೂರು ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
Advertisement
ಬೆಳ್ಳಾರೆ ಸಮೀಪದ ಬೊಳಿಯಮೂಲೆ ನಿವಾಸಿ ರೋಹಿತ್ (30) ಮೃತ ಯುವಕ ಎಂದು ಗುರುತಿಸಲಾಗಿದೆ. ಜಾಲ್ಸೂರು ಗ್ರಾಮದ ಅಡ್ಕಾ ರು ಎಂಬಲ್ಲಿ ಘಟನೆ ನಡೆದಿದ್ದು, ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ನಡೆದಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ರೋಹಿತ್ ಅವರು ಸುಳ್ಯದಲ್ಲಿ ಕೇಬಲ್ ನೆಟ್‌ವರ್ಕ್ ಕೆಲಸ ಮಾಡಿಕೊಂಡಿದ್ದರು.