Advertisement

Sullia: ಕಾಂಗ್ರೆಸ್‌ ಬಿಕ್ಕಟ್ಟು ವರದಿ ನೀಡಲು ಸೂಚನೆ

12:53 AM Apr 15, 2023 | Team Udayavani |

ಸುಳ್ಯ: ಕಾಂಗ್ರೆಸ್‌ ಅಭ್ಯರ್ಥಿ ಕೃಷ್ಣಪ್ಪ ಜಿ. ಹಾಗೂ ಟಿಕೆಟ್‌ ವಂಚಿತ ಎಚ್‌.ಎಂ. ನಂದಕುಮಾರ್‌ ಮಧ್ಯೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಾತುಕತೆ ನಡೆಸಿದ್ದು, ಕ್ಷೇತ್ರದ ಪಕ್ಷದಲ್ಲಿನ ಗೊಂದಲ ನಿವಾರಣೆಗೆ ಸಭೆ ನಡೆಸಿ ವರದಿ ನೀಡುವಂತೆ ಮಾಜಿ ಸಚಿವ ಬಿ. ರಮಾನಾಥ ರೈ ಅವರಿಗೆ ಸೂಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಕೃಷ್ಣಪ್ಪ ಜಿ. ಅವರಿಗೆ ಟಿಕೆಟ್‌ ಘೋಷಣೆಯಾದ ಮೇಲೆ ನಂದಕುಮಾರ್‌ ಅಭಿಮಾನಿಗಳು ಪಕ್ಷೇತರರಾಗಿ ಸ್ಪರ್ಧಿಸುವಂತೆ ಆಗ್ರಹಿಸಿದ್ದರು. ಪಕ್ಷದಲ್ಲಿನ ಈ ಭಿನ್ನಮತ ಚುನಾವಣೆಯಲ್ಲಿ ಹಿನ್ನಡೆ ಒದಗಿಸಬಹುದೆನ್ನಲಾಗಿತ್ತು. ಈ ಹಿನ್ನಲೆಯಲ್ಲಿ ಶುಕ್ರವಾರ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಧನಂಜಯ ಅಡ³ಂಗಾಯ, ಪ್ರಮುಖರಾದ ಎಂ. ವೆಂಕಪ್ಪ ಗೌಡ, ಭರತ್‌ ಮುಂಡೋಡಿ ಮತ್ತಿತರರ ಸಮ್ಮುಖದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ವಿವರಗಳನ್ನು ಪಡೆದ ಡಿ.ಕೆ. ಶಿವಕುಮಾರ್‌, ಮಾಜಿ ಸಚಿವ ಬಿ ರಮಾನಾಥ ರೈ ಅವರಿಗೆ ದೂರವಾಣಿ ಕರೆ ಮಾಡಿ ಸುಳ್ಯದ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವೆ. ಅಲ್ಲಿಯವರೆಗೆ ಬಿ. ಫಾರಂ ವಿತರಿಸುವುದಿಲ್ಲ ಎಂದು ಹೇಳಿದ ಡಿಕೆ ಶಿವಕುಮಾರ್‌ ಹೇಳಿದ ಹಿನ್ನೆಲೆಯಲ್ಲಿ ನಂದಕುಮಾರ್‌ ಸಹ ಎ.15ರಂದು ಪಕ್ಷೇತರವಾಗಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next