Advertisement

Sullia ಅಕ್ರಮ ಜಾನುವಾರು ಸಾಗಾಟ ಪತ್ತೆ

01:01 AM Jul 12, 2024 | Team Udayavani |

ಸುಳ್ಯ: ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆಯಾಗಿದ್ದು, ಪಿಕಪ್‌ ವಾಹನ, ಪಿಕಪ್‌ ಚಾಲಕ, ಜಾನುವಾರುಗಳನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ಗುರುವಾರ ಪಂಜದಲ್ಲಿ ನಡೆದಿದೆ.

Advertisement

ಬೆಳ್ಳಾರೆ ಕಡೆಯಿಂದ ಪಂಜದ ಕಡೆ ಬರುತ್ತಿದ್ದ ಪಿಕಪ್‌ ವಾಹನದಲ್ಲಿ ಎರಡು ದನ ಹಾಗೂ ಎರಡು ಕರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಮಾಹಿತಿ ಪಡೆದ ಪೊಲೀಸರು ವಾಹನ ಸಹಿತ ಚಾಲಕ, ನಾಲ್ಕು ಜಾನುವಾರುಗಳನ್ನು ವಶಕ್ಕೆ ಪಡೆದರು. ವಾಹನ ಚಾಲಕ ಸಕಲೇಶಪುರ ಮೂಲದ ಲೋಹಿತ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಚೊಕ್ಕಾಡಿಯಿಂದ ಸಾಕುವ ಉದ್ದೇಶದಿಂದ ಕೊಂಡೊಯ್ಯಲಾಗುತ್ತಿತ್ತು ಎನ್ನಲಾಗಿದ್ದು, ಆದರೆ ಅನುಮತಿ ಪಡೆಯದೆ ನಿಯಮಬಾಹಿರವಾಗಿ ಸಾಗಾಟ ನಡೆಸಿದ ಆರೋಪ ಕೇಳಿಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next