Advertisement

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೆಗೆ ಚಾಲನೆ

03:36 PM Jan 03, 2018 | Team Udayavani |

ಸುಳ್ಯ: ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವ ಮಂಗಳವಾರ ಉಗ್ರಾಣ ತುಂಬುವುದು ಮತ್ತು ಸಂಜೆ ಪಯ್ಯೋಳಿ ಮತ್ತು ದೈವಗಳ ಭಂಡಾರ ಆಗಮಿಸಿ ಧ್ವಜಾರೋಹಣ ನೆರವೇರುವುದರೊಂದಿಗೆ ವಿಧ್ಯುಕ್ತವಾಗಿ ಆರಂಭಗೊಂಡಿತು.

Advertisement

ಬೆಳಗ್ಗೆ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ಮಾರ್ಗದರ್ಶನದಲ್ಲಿ ಉಗ್ರಾಣ ತುಂಬಿಸುವ ಕಾರ್ಯಕ್ರಮ ಜರಗಿತು. ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ| ಹರಪ್ರಸಾದ್‌ ತುದಿಯಡ್ಕ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ, ಸಮಿತಿ ಸದಸ್ಯರಾದ ಪಡ್ಡಂಬೈಲು ವೆಂಕಟ್ರಮಣ ಗೌಡ, ಲಿಂಗಪ್ಪ ಗೌಡ ಕೇರ್ಪಳ, ಎಂ. ಮೀನಾಕ್ಷಿ ಗೌಡ, ಎನ್‌.ಎ. ರಾಮಚಂದ್ರ, ಎ. ರಮೇಶ್‌ ಬೈಪಡಿತ್ತಾಯ, ಕೃಪಾಶಂಕರ ತುದಿಯಡ್ಕ, ಡಾ| ಸಾಯೀಗೀತಾ, ಸುರೇಶ್‌ ಕುರುಂಜಿಭಾಗ್‌ ಮತ್ತಿತರಿದ್ದರು.

ಸಂಜೆ ಪನ್ನೆ ಬೀಡು 4 ಸ್ಥಾನಗಳ ದೈವಗಳ ಚಾವಡಿಯಿಂದ ಬಲ್ಲಾಳರ ಪಯ್ಯೋಳಿ ತರಲಾಯಿತು. ಬಳಿಕ ಕುಕ್ಕನ್ನೂರು ದೈವಗಳ ಭಂಡಾರ ಆಗಮಿಸಿತು. ಬಳಿಕ ಧ್ವಜಾರೋಹಣ ನೆರವೇರಿತು. ಸಂಜೆ 7ರಿಂದ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ. ಜ. 5ರಂದು ಬೆಳಗ್ಗೆ ಪನ್ನೆಬೀಡು ಶ್ರೀ ಭಗವತಿ ಸ್ಥಾನದಲ್ಲಿ ಪ್ರತಿಷ್ಠಾ ದಿನ ಮಹಾಪೂಜೆ ನಡೆಯಲಿದೆ.

ಸಾಂಸ್ಕೃತಿಕೋತ್ಸವಕ್ಕೆ ಚಾಲನೆ
ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನ ಮತ್ತು ಶ್ರೀ ಚೆನ್ನಕೇಶವ ಯುವ ಸೇವಾ ಸಂಘಗಳ ಆಶ್ರಯದಲ್ಲಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗ ಜರಗಿದ 15ನೇ ವರ್ಷದ ‘ಸಾಂಸ್ಕೃತಿಕೋತ್ಸವ -2018’ಕ್ಕೆ ಚಾಲನೆ ನೀಡಲಾಯಿತು. ಎಒಎಲ್‌ಇ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಅವರು ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಶ್ರೀ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ| ಹರಪ್ರಸಾದ್‌ ತುದಿಯಡ್ಕ, ನಮ್ಮ ಕಲಾ ಪ್ರಕಾರಗಳು, ಉತ್ಸವ ಆಚರಣೆಗಳು, ಧಾರ್ಮಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ತಿಳಿಸಿದರು.

ಸಮಿತಿ ಸದಸ್ಯ ಪಡ್ಡಂಬೈಲು ವೆಂಕಟ್ರಮಣ ಗೌಡ ಸಭೆಯನ್ನುದ್ದೇಶಿಸಿ ಮಾತನಾಡಿದರು. ನ.ಪಂ. ಸದಸ್ಯ ಗಿರೀಶ್‌ ಕಲ್ಲಗದ್ದೆ, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಲಿಂಗಪ್ಪ ಗೌಡ ಕೇರ್ಪಳ, ಎಂ. ಮೀನಾಕ್ಷಿ ಗೌಡ, ಎ. ರಮೇಶ್‌ ಬೈಪಡಿತ್ತಾಯ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮ ಬಳಿಕ ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

Advertisement
Advertisement

Udayavani is now on Telegram. Click here to join our channel and stay updated with the latest news.

Next