Advertisement
ಪಂಜ-ಬಳಕ್ಕ-ಗುತ್ತಿಗಾರು ರಸ್ತೆ ಮೇಲ್ದರ್ಜೆ ಗೇರಿಸಲಾದ ಜಿಲ್ಲಾ ಮುಖ್ಯ ರಸ್ತೆಯಾಗಿದ್ದು, ಕೆಲವು ವರ್ಷಗಳ ಹಿಂದೆ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ರಸ್ತೆಯ ಅಭಿವೃದ್ಧಿ ನಡೆಸಲಾಗಿತ್ತು. ಆದರೆ ಪೂರ್ಣ ಪ್ರಮಾಣದ ಅಭಿವೃದ್ಧಿ ಆಗದೆ ಇದ್ದುದರಿಂದ ಇಂದಿಗೂ ಈ ರಸ್ತೆ ಹೊಂಡ-ಗುಂಡಿಗಳಿಂದಲೇ ಕೂಡಿದೆ.
Related Articles
ಇದೇ ರಸ್ತೆಯ ಜಳಕದ ಹೊಳೆ ಎಂಬಲ್ಲಿ 1983ರಲ್ಲಿ ನಿರ್ಮಾಣಗೊಂಡಿರುವ ಸೇತುವೆ ಪ್ರಸ್ತುತ ಶಿಥಿಲಾವಸ್ಥೆ ತಲುಪಿದ್ದು ಅಪಾಯಕಾರಿ ಸ್ಥಿತಿಯಲ್ಲಿದೆ. ಈ ಸೇತುವೆಯಲ್ಲಿ ಘನ ವಾಹನ ಸಂಚಾರಕ್ಕೆ ಯೋಗ್ಯವಲ್ಲದ ಕಾರಣ ಘನ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರಿಣಾಮ ಪಂಜ-ಬಳಕ್ಕ-ಗುತ್ತಿಗಾರು ರಸ್ತೆಯಲ್ಲಿ ಘನ ವಾಹನ ಸಂಚಾರ ಸ್ಥಗಿಗೊಂಡಿದೆ. ಸೇತುವೆಯಲ್ಲೂ ಹೊಂಡ-ಗುಂಡಿ ನಿರ್ಮಾಣಗೊಂಡು, ಸಾಮಾನ್ಯ ವಾಹನಗಳ ಸಂಚಾರಕ್ಕೂ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
Advertisement
ಪಂಜ-ಗುತ್ತಿಗಾರು ರಸ್ತೆಯ ಹಲವೆಡೆ ರಸ್ತೆಯಲ್ಲಿ ಹೊಂಡ-ಗುಂಡಿ ನಿರ್ಮಾಣಗೊಂಡು ವಾಹನ ಸಂಚಾರಕ್ಕೆ ಕಷ್ಟವಾಗುತ್ತಿದೆ. ದ್ವಿಚಕ್ರ ವಾಹನ ಸಂಚಾರವೇ ಅಪಾಯಕಾರಿಯಾಗಿದೆ. ಇಕ್ಕಟ್ಟಾದ ರಸ್ತೆಯಲ್ಲಿ ಬೇರೆ ವಾಹನಗಳಿಗೆ ಸೈಡ್ ಕೊಡಲೂ ಆಗುತ್ತಿಲ್ಲ.-ಸೂರ್ಯನಾರಾಯಣ ಸಂಪ, ಪಂಜ ಗುತ್ತಿಗಾರು-ಪಂಜ ರಸ್ತೆಯ ಚಿಕ್ಮುಳಿವರೆಗೆ ರಸ್ತೆ ಉತ್ತಮವಾಗಿದ್ದರೂ ಚಿಕ್ಮುಳಿ ಎಂಬಲ್ಲಿಂದ ಪಂಜದ ವರೆಗೆ ರಸ್ತೆ ತೀರಾ ಹದಗೆಟ್ಟು ವಾಹನ ಸಂಚರಿಸಲು ಅಸಾಧ್ಯವಾದ ಸ್ಥಿತಿಯಲ್ಲಿದೆ. ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ದುರಸ್ತಿ ಮಾಡಿದರೂ ಪ್ರಯೋಜನವಾಗುವ ಸ್ಥಿತಿಯಲ್ಲಿಲ್ಲ. ಕೂಡಲೇ ರಸ್ತೆಯ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು.
-ಅನಿಲ್ ಗುತ್ತಿಗಾರು, ರಸ್ತೆಯ ಫಲಾನುಭವಿ -ದಯಾನಂದ ಕಲ್ನಾರ್