Advertisement

Sullia: ಪಂಚಾಯತ್‌ ರಾಜ್‌ ಸಮಾವೇಶ; ಗ್ರಾಮ ಪಂಚಾಯತ್ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ

02:55 PM Dec 05, 2024 | Team Udayavani |

ಸುಳ್ಯ: ಸ್ಥಳೀಯ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸುವ ಗ್ರಾಮ ಪಂಚಾಯತ್‌ ಇಂದು ಹಲವಾರು ಸಮಸ್ಯೆ ಗಳನ್ನು ಎದುರಿಸುತ್ತಿದೆ. ಸಮಸ್ಯೆಗಳ ಬಗ್ಗೆ ವಿಧಾನ ಸಭೆಯಲ್ಲಿ ಪ್ರಸ್ತಾವಿಸಿ ಸಾಧ್ಯವಾಗುವ ಸಮಸ್ಯೆಗಳನ್ನು ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

Advertisement

ಸುಳ್ಯ ತಾಲೂಕು ಗ್ರಾಮ ಪಂಚಾಯತ್‌ ಸದಸ್ಯರ ಮಹಾ ಒಕ್ಕೂಟದ ವತಿಯಿಂದ ತಾ. ಪಂಚಾಯತ್‌ ಸಭಾಂಗಣದಲ್ಲಿ ಬುಧವಾರ ನಡೆದ ಪಂಚಾಯತ್‌ ರಾಜ್‌ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾ.ಪಂ.ಗೆ ಚುನಾಯಿತರಾಗಿ ಗ್ರಾಮ ಸ್ಥರಿಗೆ ಸೇವೆ ಸಲ್ಲಿಸುವ ಅವಕಾಶ ಸದಸ್ಯರಿಗೆ ಸಿಕ್ಕಿದೆ. ಗ್ರಾ.ಪಂ. ಸದಸ್ಯರು ಪಿಡಿಒ, ಕಾರ್ಯದರ್ಶಿ, ಸಿಬಂದಿ ಸಹಕಾರ ಪಡೆದು ಗ್ರಾಮದ ಅಭಿವೃದ್ಧಿ ಪರ ಕೆಲಸ ಮಾಡಿ ಎಂದು ಕರೆ ನೀಡಿದರು.

ಸುಳ್ಯ ತಾಲೂಕು ಗ್ರಾ.ಪಂ. ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷ ಶೈಲೇಶ್‌ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ದ.ಕ.ರಾಜೀವ್‌ ಗಾಂಧಿ ಪಂಚಾಯತ್‌ ಸಂಘಟನೆ ಅಧ್ಯಕ್ಷ ಸುಭಾಶ್ಚಂದ್ರ ಕೊಳ್ನಾಡು, ಒಕ್ಕೂಟದ ಜಿಲ್ಲಾ ಅಧ್ಯಕ್ಷ ಹರೀಶ್‌ ರೈ ಉಬರಡ್ಕ, ತಾಲೂಕು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೇಶವ ಅಡ್ತಲೆ, ಸಂಚಾಲಕ ಮಹೇಶ್‌ ಕುಮಾರ್‌ ಕರಿಕ್ಕಳ ಮತ್ತಿತರರು ಉಪಸ್ಥಿತರಿದ್ದರು. ಶೈಲೇಶ್‌ ಅಂಬೆ ಕಲ್ಲು ಸ್ವಾಗತಿಸಿದರು. ಮಡಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ ಉಷಾ ಜಯರಾಮ ವಂದಿಸಿದರು. ರವೀಂದ್ರ ರೈ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next