Advertisement
ಮುಜೀಬ್ ಅವರು ಕಾರನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದ ವೇಳೆ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಿಂದ ಕಾರು ಜಖಂಗೊಂಡಿದೆ.
ಸುಳ್ಯ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ಬುಧವಾರ ಬೆಳಗ್ಗೆ ಸುಳ್ಯದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿ ಸಂಭವಿಸಿದೆ. ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ (55) ಮೃತರು. ಅವರು ಬುಧವಾರ ಮುಂಜಾನೆ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ವೇಳೆ ಇವರಿಗೆ ಕಾರು ಢಿಕ್ಕಿಯಾಗಿದೆ. ಕೂಡಲೇ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆ ದಾಖಲಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು. ಜಟ್ಟಿಪಳ್ಳ ನಿವಾಸಿಯಾಗಿದ್ದ ಅವರು ಹಲವಾರು ವರ್ಷಗಳಿಂದ ಮೇಸಿŒ ವೃತ್ತಿ ಮಾಡುತ್ತಿದ್ದರು. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Articles
Advertisement