Advertisement

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

10:57 PM Apr 17, 2024 | Team Udayavani |

ಸುಳ್ಯ: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ಮಂಗಳವಾರ ಸಂಭವಿಸಿದೆ.

Advertisement

ಮುಜೀಬ್‌ ಅವರು ಕಾರನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದ ವೇಳೆ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್‌ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಿಂದ ಕಾರು ಜಖಂಗೊಂಡಿದೆ.

ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
ಸುಳ್ಯ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ಬುಧವಾರ ಬೆಳಗ್ಗೆ ಸುಳ್ಯದ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ ಬಳಿ ಸಂಭವಿಸಿದೆ.

ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ (55) ಮೃತರು. ಅವರು ಬುಧವಾರ ಮುಂಜಾನೆ ಬಸ್‌ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ವೇಳೆ ಇವರಿಗೆ ಕಾರು ಢಿಕ್ಕಿಯಾಗಿದೆ. ಕೂಡಲೇ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆ ದಾಖಲಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು. ಜಟ್ಟಿಪಳ್ಳ ನಿವಾಸಿಯಾಗಿದ್ದ ಅವರು ಹಲವಾರು ವರ್ಷಗಳಿಂದ ಮೇಸಿŒ ವೃತ್ತಿ ಮಾಡುತ್ತಿದ್ದರು. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next