ಸುಳ್ಯ: ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಶವ ಗೋಣಿ ಚೀಲದಲ್ಲಿ ತುಂಬಿಸಿಟ್ಟ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದ್ದು, ಪತಿಯೇ ಪತ್ನಿಯನ್ನು ಹತ್ಯೆಗೈದು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಸುಳ್ಯ ನಗರ ಬೀರಮಂಗಲ ಎಂಬಲ್ಲಿ ಈ ಘಟನೆ ನಡೆದಿದೆ.
ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ಕೃತ್ಯ ಎಸಗಿದ ಆರೋಪಿ ಎಂದು ಶಂಕಿಸಲಾಗಿದೆ.
ಇಮ್ರಾನ್ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆಂದು ತಿಳಿಸಿ ತೆರಳಿದ್ದ ಎನ್ನಲಾಗಿದೆ.
ಅವನು ಹೋಗುವಾಗ ಅವನ ಪತ್ನಿಯನ್ನು ಕರೆದುಕೊಂಡು ಹೋಗಿರಲಿಲ್ಲ ಎನ್ನಲಾಗಿದ್ದು, ಈ ಬಗ್ಗೆ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದರು.
Related Articles
ಪೋಲಿಸರಿಗೆ ವಿಷಯ ತಿಳಿಸಿ ಪೊಲೀಸರು ಸಂಜೆ ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪರಿಶೀಲಿಸಿದ ವೇಳೆ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಳ್ಯ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.