Advertisement

ಸುಳ್ಯ : ಮದುವೆಯಾದ ಒಂದೇ ವರ್ಷಕ್ಕೆ ಆತ್ಮಹತ್ಯೆಗೆ ಶರಣಾದ ಮಹಿಳೆ

08:27 PM May 07, 2022 | Team Udayavani |

ಸುಳ್ಯ : ವಿವಾಹಿತ ಮಹಿಳೆಯೋರ್ವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧೀನಗರದ ಬಾಡಿಗೆ ಮನೆಯಲ್ಲಿ ಮೇ 6ರ ಸಂಜೆ ಬೆಳಕಿಗೆ ಬಂದಿದೆ.
ಸುಳ್ಯ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಅವರ ಪುತ್ರಿ ಆಯೀಶಾ (20) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

Advertisement

ಕಳೆದ ವರ್ಷ ಕಾಸರಗೋಡಿನ ಯುವಕನೊಂದಿಗೆ ಈಕೆಯ ವಿವಾಹವಾಗಿದ್ದು, ಪತಿ ವಿದೇಶದಲ್ಲಿದ್ದಾರೆ ಎಂದು ತಿಳಿದುಬಂದಿದೆ. ವಿವಿಧ ಕಡೆಗಳಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಇವರು ಇತ್ತೀಚೆಗೆ ಗಾಂಧೀನಗರಕ್ಕೆ ಬಾಡಿಗೆ ಮನೆಗೆ ಬಂದಿದ್ದರು ಎನ್ನಲಾಗಿದೆ. ಜೀವನದಲ್ಲಿ ಮನನೊಂದು ಕೃತ್ಯ ಎಸಗಿರಬಹುದೆಂದು ತಾಯಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬಳ್ಳಾರಿ : ಕಾಲೇಜು ಹಾಸ್ಟೆಲ್ ನಲ್ಲೇ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

Advertisement

Udayavani is now on Telegram. Click here to join our channel and stay updated with the latest news.

Next