Advertisement

Sulya: ಯೋಗ ಸ್ಪರ್ಧೆ: ಸುಳ್ಯ ಸೈಂಟ್‌ ಜೋಸೆಫ್‌ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

01:19 AM Oct 16, 2024 | Team Udayavani |

ಸುಳ್ಯ: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಚಿತ್ರದುರ್ಗದ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯಲ್ಲಿ ನಡೆದ
ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್‌ ಜೋಸೆಫ್‌ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Advertisement

ಸಾಂಪ್ರದಾಯಿಕ ವಿಭಾಗದಲ್ಲಿ ಆರನೇ ತರಗತಿಯ ಹಾರ್ದಿಕ ಕೆರೆಕೋಡಿ 4ನೇ ಮತ್ತು ಸೋನಾ ಅಡ್ಕಾರ್‌ 5ನೇ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶಾಲಾ ಸಂಚಾಲಕ ವಂ| ವಿಕ್ಟರ್‌ ಡಿ’ಸೋಜಾ, ಮುಖ್ಯೋಪಾಧ್ಯಾಯಿನಿ ಸಿಸ್ಟರ್‌ ಮೇರಿ ಸ್ಟೆಲ್ಲಾ ಅವರ ಮಾರ್ಗದರ್ಶನದಲ್ಲಿ, ತಂಡದ ವ್ಯವಸ್ಥಾಪಕಿಯಾಗಿ ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪವೇಣಿ ಹುದೇರಿ ಸಹಕರಿಸಿದ್ದು ಸಂತೋಷ್‌ ಮುಂಡಕಜೆ ತರಬೇತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next