Advertisement

ಜನರ ಅಭಿಪ್ರಾಯ ಸಂಗ್ರಹಿಸುತ್ತಿರುವೆ 

01:51 AM Mar 03, 2019 | |

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಲು ನಿರ್ಧರಿಸಿರುವ ನಟಿ ಸುಮಲತಾ ಅಂಬರೀಶ್‌, ಶನಿವಾರ ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು.

Advertisement

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಸ್ವಾಮೀಜಿಯವರು ಮೊದಲಿನಿಂದಲೂ ನಮ್ಮ ಕುಟುಂಬಕ್ಕೆ ಪರಿಚಯ. ಹೀಗಾಗಿ, ಅವರ ಆಶೀರ್ವಾದ ಪಡೆಯಲು ಬಂದಿದ್ದೆ. ಪ್ರಸಕ್ತ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಜೊತೆಗೆ, ಅಭಿಯಸಿನಿಮಾ ಬಗ್ಗೆಯೂ ಚರ್ಚೆ ನಡೆಸಿದ್ದೇನೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಂಬಂಧ ಜನರ ಅಭಿಪ್ರಾಯ ಸಂಗ್ರಹಿಸಲು ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಜೆಡಿಎಸ್‌ನವರ್ಯಾರೂ ನನ್ನ ಜತೆ ಮಾತನಾಡಿಲ್ಲ’ ಎಂದರು. ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ನಟ ದೊಡ್ಡಣ್ಣ ಜೊತೆಗಿದ್ದರು.

ಅಂಬರೀಶ್‌ ವಿರುದ್ಧ ದ ಹೇಳಿಕೆ ಬೇಸರ ತರಿಸಿದೆ: ಈ ವೇಳೆ, ಸುದ್ದಿಗಾರರ ಜೊತೆ ಮಾತನಾಡಿದ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಅಂಬರೀಶ್‌ ಅವರು ಬದುಕಿದ್ದಾಗ ಗೌರವ ಕೊಡುತ್ತಿದ್ದ ಕೆಲವರು ಈಗ ವ್ಯತಿರಿಕ್ತವಾಗಿ ಮಾತನಾಡುತ್ತಿದ್ದಾರೆ. ಅವರು ಬದುಕಿದ್ದಾಗ ಮಾತನಾಡಲು ಹೆದರುತ್ತಿದ್ದವರು, ಈಗ ಏನೇನೋ ಮಾತನಾಡುತ್ತಿದ್ದಾರೆ. ಅವರ ಈ ಮಾತುಗಳೇ ನಮಗೆ ಹೆಚ್ಚು ಧೈರ್ಯ ತರುತ್ತಿದೆ. ಅಂಬರೀಶ್‌ ಅವರ ಶಾಲಾ ದಿನಗಳಿಂದಲೂ ಅವರ ಜೊತೆಗಿದ್ದೆ. ಈಗ ಅವರಿಲ್ಲ, ಸುಮಲತಾ ಅಕ್ಕ ಅವರೊಂದಿಗಿದ್ದೇನೆ. ಅವರು ರಾಜಕೀಯದಲ್ಲಿರಲಿ,ಸಿನಿಮಾದಲ್ಲಿರಲಿ ಅವರ ಜೊತೆಗಿರುತ್ತೇನೆ ಎಂದರು

ಸುಮಲತಾ ಟಿಕೆಟ್‌ ಕೇಳುವುದರಲ್ಲಿ ತಪ್ಪಿಲ್ಲ: ದಿನೇಶ್‌
ಬೆಂಗಳೂರು: ಸುಮಲತಾ ಅಂಬರೀಶ್‌ ಅವರು ಮಂಡ್ಯದಿಂದ ಕಾಂಗ್ರೆಸ್‌ ಟಿಕೆಟ್‌ ಕೇಳುವುದರಲ್ಲಿ ತಪ್ಪಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಕುರುಹಿನಶೆಟ್ಟಿ ಹಾಗೂ ಪದ್ಮಸಾಲಿ ಸಮುದಾಯದ ಮುಖಂಡರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ಅಂಬರೀಶ್‌ ಅವರು ಕಾಂಗ್ರೆಸ್‌ ಪಕ್ಷದಲ್ಲೇ ಇದ್ದವರು. ಹೀಗಾಗಿ, ಸುಮಲತಾ ಅವರು ಕಾಂಗ್ರೆಸ್‌ನಿಂದ ಟಿಕೆಟ್‌ ಕೇಳುವುದರಲ್ಲಿ ತಪ್ಪಿಲ್ಲ. ಜೆಡಿಎಸ್‌ನವರು ಕಾಂಗ್ರೆಸ್‌ನ ಹಾಲಿ ಸಂಸದರಿರುವ ಕ್ಷೇತ್ರಗಳನ್ನು ಕೇಳುತ್ತಿದ್ದಾರೆ. ಹೀಗಾಗಿ, ನಮ್ಮ ಪಕ್ಷದವರೂ ಮಂಡ್ಯದಲ್ಲಿ ಟಿಕೆಟ್‌ ಕೇಳುತ್ತಿದ್ದಾರೆ. ಆದರೆ,ಹೈಕಮಾಂಡ್‌ ನಿರ್ಣಯವೇ ಅಂತಿಮವಾಗಿರುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next