Advertisement
ಮಂಡ್ಯದ ಚಾಮುಂಡೇಶ್ವರಿ ನಗರದ ನಿವಾಸದ ಬಳಿ ನಡೆದ ಸುದ್ದಿಗೋಷ್ಠಿಯಲ್ಲಿ ಎಲ್ಲ ರೀತಿಯಿಂದಲೂ ಯೋಚನೆ ಮಾಡಿ, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳ ಸಲಹೆ, ಸೂಚನೆ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದು, ಇನ್ನು ಮುಂದೆ ನನ್ನ ಸಂಪೂರ್ಣ ಬೆಂಬಲ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಲಿದ್ದೇನೆ ಎಂದು ಪ್ರಕಟಿಸಿದ್ದಾರೆ.
ಪಕ್ಷೇತರವಾಗಿ ಸ್ಪರ್ಧೆ ಮಾಡಿ ಆಯ್ಕೆಯಾದುದರಿಂದ ಗೆದ್ದ 6 ತಿಂಗಳಲ್ಲಿಯೇ ಪಕ್ಷ ಸೇರ್ಪಡೆಯಾಗಲು ಅವಕಾಶವಿದೆ. ಆದರೆ ಈಗಾಗಲೇ ನಾಲ್ಕು ವರ್ಷಗಳಾಗಿರುವುದರಿಂದ ತಾಂತ್ರಿಕ ಕಾರಣಗಳಿರುವುದರಿಂದ ಪಕ್ಷ ಸೇರ್ಪಡೆಯಾಗಲು ಸಾಧ್ಯವಿಲ್ಲ. ಪಕ್ಷ ಸೇರ್ಪಡೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಜಿಲ್ಲೆಯ ಅಭಿವೃದ್ಧಿಗಾಗಿ ನಿರ್ಧಾರ
ಜಿಲ್ಲೆಯ ಅಭಿವೃದ್ಧಿಗಾಗಿ ಕೆಲವು ಷರತ್ತುಗಳನ್ನು ಮುಂದಿಟ್ಟುಕೊಂಡು ಬಿಜೆಪಿಗೆ ಬೆಂಬಲ ಘೋಷಿಸಿದ್ದೇನೆ. ನನ್ನ ವೈಯಕ್ತಿಕವಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ. ನನಗೆ ನನ್ನ ಭವಿಷ್ಯ ಮುಖ್ಯವಲ್ಲ. ಇದುವರೆಗೂ ನಾನು ತಂದಿರುವ ಯೋಜನೆಗಳಿಗೆ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರಗಳು ನನಗೆ ಸಹಕಾರ ನೀಡಿದ್ದಾರೆ. ಇಡೀ ದೇಶ ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳಲು ಪ್ರಧಾನಿ ನರೇಂದ್ರಮೋದಿ ಅವರು ಕಾರಣರಾಗಿದ್ದಾರೆ. ಅಂಥವರ ನಾಯಕತ್ವ ನನಗೆ ಅಗತ್ಯವಿದೆ. ಅಲ್ಲದೆ, ಇದುವರೆಗೂ ನನ್ನದು ಒಂಟಿ ಧ್ವನಿಯಾಗಿತ್ತು. ಜೆಡಿಎಸ್ ನಾಯಕರು ಒಂದು ಹೆಣ್ಣು ಎನ್ನದೆ ಹೀನಾಯವಾಗಿ ಮಾತನಾಡಿದರು. ಆಗ ನನ್ನ ಪರ ಮಾತನಾಡಲು ಯಾರೂ ಇರಲಿಲ್ಲ. ಈ ಎಲ್ಲ ಕಾರಣಗಳಿಂದ ಬಿಜೆಪಿ ಬೆಂಬಲಿಸಲು ನಿರ್ಧರಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
Related Articles
ನಾನು ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣ ಮಾಡಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ನನ್ನ ಮಗ ಅಭಿಷೇಕ್ ರಾಜಕಾರಣಕ್ಕೆ ಬರಲ್ಲ. ಅವನಿಗೆ ಎರಡು ಪಕ್ಷಗಳಿಂದ ಮಂಡ್ಯ ಅಥವಾ ಮದ್ದೂರಿನಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದರು. ಆಗಲೂ ಸಹ ಅಭಿಷೇಕ್ ಬೇಡ ಎಂದಿದ್ದನು. ಆದ್ದರಿಂದ ಆತ ರಾಜಕಾರಣಕ್ಕೆ ಬರುವುದಿಲ್ಲ. ಈ ವರ್ಷ ಮದುವೆಯಾಗಲಿದ್ದು, ಸಿನಿಮಾಗಳನ್ನು ಮಾಡಲಿದ್ದಾನೆ ಎಂದು ಹೇಳಿದರು.
Advertisement