Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಮಂಡ್ಯ ಜಿಲ್ಲೆಯ ಗಣಿ ಅಧಿಕಾರಿಗಳು ಕೂಡ ಏನೂ ಆಗಿಲ್ಲ ಎನ್ನುವಂತೆ ಮಾತನಾಡುತ್ತಾರೆ. ಅವರ ಮೇಲೆಯೂ ಒತ್ತಡಗಳು ಇರಬಹುದು. ಹೀಗಾಗಿ ಸ್ವತಂತ್ರ ತನಿಖೆಯಾಗಬೇಕು ರಾಜ್ಯದ ಅಧಿಕಾರಿಗಳಿಂದ ಸಾಧ್ಯವಾಗದಿದ್ದರೆ ಸಿಬಿಐ ತನಿಖೆ ಮಾಡಿಸಲಿ. ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ 1200ಕೋಟಿ ನಷ್ಟ ಆಗಿದೆ. ಇಷ್ಟು ರಾಜಧನ ವಸೂಲಿ ಮಾಡಿದ್ರೆ ಮಂಡ್ಯ ಅಭಿವೃದ್ಧಿಗೆ ಬಳಸಬಹುದಿತ್ತು ಎಂದರು.
Related Articles
Advertisement
ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ:
ಅಕ್ರಮ ಗಣಿಗಾರಿಕೆಯನ್ನು ನಾನು ಎಕ್ಸ್‌ಪೋಸ್ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ. ಕೆಆರ್‌ಎಸ್ ಡ್ಯಾಂ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಬ್ಲಾಸ್ಟಿಂಗ್ ಮಾಡುವಂತಿಲ್ಲ. ಈ ಪ್ರದೇಶದಲ್ಲಿ ಅಕ್ರಮ, ಸಕ್ರಮ ಅನ್ನುವ ಪ್ರಶ್ನೆಯೇ ಬರೋದಿಲ್ಲ. ಗಣಿಗಾರಿಕೆಯಿಂದಾಗಿ ಕೆಆರ್‌ಎಸ್ ಡ್ಯಾಂನಲ್ಲಿ ಕಂಪನ ದಾಖಲಾಗಿದೆ. ಈ ಸಂಬಂಧ ಅಧಿಕೃತ ದಾಖಲೆಗಳೂ ಇವೆ. ಆದ್ದರಿಂದ ಗಣಿಗಾರಿಕೆ ನಿಲ್ಲಬೇಕು ಅಂತ ಹೋರಾಟ ಮಾಡುತ್ತಿದ್ದೇನೆ ಎಂದರು.
ಸರ್ಕಾರವನ್ನಾಗಲೀ, ಮತ್ಯಾರನ್ನೋ ಆಗಲಿ ಚಾರ್ಜ್ ಮಾಡೋದು ನನ್ನ ಉದ್ದೇಶ ಅಲ್ಲ. ವಿರೋಧ ಪಕ್ಷದವರನ್ನೂ ಎಳೆತಂದು ಇದಕ್ಕೆ ರಾಜಕೀಯ ರೂಪ ಕೊಡೋದಕ್ಕೂ ನಾನು ಬಯಸಲ್ಲ. ಆದರೆ ಅಕ್ರಮದ ಬಗ್ಗೆ ಹೋರಾಡುವ ಮನಸ್ಥಿತಿ ಇರುವ ಎಲ್ಲರ ಸಹಕಾರ ಕೇಳುತ್ತೇನೆ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸುವವರೆಗೂ ಹೋರಾಟ ಮಾಡುತ್ತೇನೆ ಎಂದು ಹೇಳಿದರು.