Advertisement

ಸುಮಲತಾರನ್ನು ಕಡೆಗಣಿಸುವಂತಿಲ್ಲ: ವೇಣುಗೋಪಾಲ್‌ 

12:21 AM Feb 23, 2019 | |

ಬೆಂಗಳೂರು: ಮೈತ್ರಿ ಧರ್ಮದ ಪ್ರಕಾರ ಮಂಡ್ಯ ಲೋಕಸಭಾಕ್ಷೇತ್ರವನ್ನು ಜೆಡಿಎಸ್‌ಗೆ ಸ್ಥಾನ ಬಿಟ್ಟು ಕೊಡುವುದಕ್ಕೂ ಮೊದಲು ಕಾಂಗ್ರೆಸ್‌ಗೆ ಬಿಟ್ಟು ಕೊಡಬೇಕು ಎಂಬ ಬೇಡಿಕೆ ಇಡುವಂತೆ ಕಾಂಗ್ರೆಸ್‌
ಉಸ್ತುವಾರಿ ವೇಣುಗೋಪಾಲ್‌ ನಾಯಕರಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.

Advertisement

ಹಾಲಿ ಸಂಸದರ ಕ್ಷೇತ್ರಗಳನ್ನು ಎರಡೂ ಪಕ್ಷಗಳೂ ಬಿಟ್ಟು ಕೊಡುವುದಿಲ್ಲ ಎಂಬ ನಿರ್ಧಾರಕ್ಕೆ ಬಂದರೆ, ಮಂಡ್ಯ ಕ್ಷೇತ್ರ ಜೆಡಿಎಸ್‌ ಪಾಲಾಗುತ್ತದೆ. ಒಂದು ವೇಳೆ, ಜೆಡಿಎಸ್‌ನವರು ಕಾಂಗ್ರೆಸ್‌ನ ಹಾಲಿ ಸಂಸದರ
ಕ್ಷೇತ್ರಗಳನ್ನು ಬಿಟ್ಟು ಕೊಡುವಂತೆ ಪಟ್ಟು ಹಿಡಿದರೆ, ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡುವಂತೆ ಪಟ್ಟು ಹಿಡಿಯಲು ಗುರುವಾರ ನಡೆದ ರಾಜ್ಯ ನಾಯಕರ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

ಮಂಡ್ಯದಿಂದ ಸುಮಲತಾ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ನಿಂದ ಟಿಕೆಟ್‌ ನೀಡಬೇಕೆಂಬ ಬೇಡಿಕೆ ಯನ್ನೂ ಇಟ್ಟಿದ್ದಾರೆ. ಈ ಚುನಾವಣೆಯಲ್ಲಿ ಸುಮಲತಾ ಅವರನ್ನು ನಿರ್ಲಕ್ಷ್ಯ ಮಾಡುವಂತಿಲ್ಲ ಎಂಬ ಸಲಹೆಯನ್ನು ವೇಣುಗೋಪಾಲ್‌ ನೀಡಿದ್ದಾರೆ. ಸುಮಲತಾ ಪಕ್ಷೇತರರಾಗಿ ಸ್ಪರ್ಧಿಸಿದರೆ, ಕಾಂಗ್ರೆಸ್‌ನಿಂದ ಅವರ ಬಗ್ಗೆ ಯಾವುದೇ ರೀತಿಯ ವ್ಯತಿರಿಕ್ತ ಹೇಳಿಕೆಗಳು ಬರದಂತೆ
ನೋಡಿಕೊಳ್ಳಲು ಸೂಚಿಸಿದ್ದಾರೆ ಎನ್ನಲಾಗಿದೆ. ಸುಮಲತಾ ಅವರನ್ನು ಮಂಡ್ಯಕ್ಕೆ ಮಾತ್ರ ಸೀಮಿತವಾಗಿ ನೋಡದೆ ಹಳೇ ಮೈಸೂರು ಭಾಗದಲ್ಲಿ ಅಂಬರೀಶ ಅವರ ವರ್ಚಸ್ಸು ಹಾಗೂ ಭವಿಷ್ಯದ ರಾಜಕಾರಣದಲ್ಲಿ ಅವರಿಂದ ಕಾಂಗ್ರೆಸ್‌ಗೆ ಆಗುವ ಅನುಕೂಲಗಳನ್ನು ಗಮನದಲ್ಲಿಟ್ಟುಕೊಂಡು ನಡೆಯಬೇಕು ಎಂದು ವೇಣುಗೋಪಾಲ್‌ ಸೂಚಿಸಿದ್ದಾರೆಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next