Advertisement

ಉಪಕಾರ ತೀರಿಸುವ ಮನಸ್ಸಿದ್ದರೆ ಸುಮಲತಾ ಸೂಕ್ತ ತೀರ್ಮಾನ ಕೈಗೊಳ್ಳಲಿ: ಡಿಕೆಶಿ

11:18 PM Mar 31, 2024 | Team Udayavani |

ಬೆಂಗಳೂರು: ಸಂಸದೆ ಸುಮಲತಾ ಅವರಿಗೆ ಸಹಾಯ ಮಾಡಿದವರ ಉಪಕಾರ ತೀರಿಸುವ ಮನಸ್ಸಿದ್ದರೆ, ಅದಕ್ಕೆ ಅನುಗುಣವಾಗಿ ಸೂಕ್ತ ತೀರ್ಮಾನ ಕೈಗೊಳ್ಳಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

Advertisement

ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಅವರಿಗೂ ಜೆಡಿಎಸ್‌ ನಾಯಕರಿಗೆ ನಡೆದ ಮಾತಿನ ಕಾಳಗ ಹಾಗೂ ಅವರು ಸ್ವಾಭಿಮಾನದ ಹೆಸರಲ್ಲಿ ಮತಯಾಚನೆ ಮಾಡಿದ್ದಕ್ಕೆ ಅವರು ಬದ್ಧರಿದ್ದರೆ ಅವರನ್ನು ಪಕ್ಷಕ್ಕೆ ಕರೆತರುವ ಬಗ್ಗೆ ಆಲೋಚನೆ ಮಾಡಬಹುದು. ಈಗ ಅವರು ಬಿಜೆಪಿ ಜತೆ ಗುರುತಿಸಿಕೊಂಡಿದ್ದಾರೆ. ಅವರ ಬದ್ಧತೆ ಬದಲಾಗದಿದ್ದರೆ ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್‌ನಿಂದ ಆಹ್ವಾನವಿದೆ, ನಾನು ಇನ್ನೂ ತೀರ್ಮಾನ ಮಾಡಿಲ್ಲ ಎಂಬ ಸುಮಲತಾ ಹೇಳಿಕೆ ವಿಚಾರವಾಗಿ ಕೇಳಿದಾಗ, ಈ ಬಗ್ಗೆ ತೀರ್ಮಾನವನ್ನು ಸ್ಥಳೀಯ ನಾಯಕರಿಗೆ ಬಿಡುತ್ತೇವೆ. ಸ್ಥಳೀಯ ಮಟ್ಟದಲ್ಲಿ ಎಲ್ಲರೂ ಒಪ್ಪಿದಾಗ, ಹೈಕಮಾಂಡ್‌ ನಾಯಕರು ಯಾರನ್ನು ಕೈಬಿಡುವುದಿಲ್ಲ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next