Advertisement

ಸುಮಲತಾ ಗೆಲುವು ನಿಶ್ಚಿತ

02:19 AM May 03, 2019 | Team Udayavani |

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅವರ ಗೆಲುವು ನೂರಕ್ಕೆ ನೂರು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ‌ ಹೇಳಿದರು.


Advertisement

ನಗರದ ಡಾಲರ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಸುಮಲತಾ ಅವರೊಂದಿಗೆ ಇತರರು ಕೆಲಸ ಮಾಡಿದ್ದಾರೆ ಎಂಬುದು ಜಗತ್ತಿಗೇ ಗೊತ್ತಿದೆ. ಅವರ ಗೆಲುವು ಖಾತರಿಯಾದ ಬಳಿಕ ಭೋಜನ ಕೂಟಕ್ಕೆ ಸೇರಿದ್ದಾರೆ. ಮೇ 23ಕ್ಕೆ ಫ‌ಲಿತಾಂಶ ಪ್ರಕಟವಾದ ನಂತರದ ಬೆಳವಣಿಗೆಗಳ ಬಗ್ಗೆ ಎಲ್ಲರೂ ಗಮನಿಸುತ್ತಿದ್ದಾರೆ. ಮುಂದೆ ಏನಾಗುವುದೋ ಎಂಬುದನ್ನು ಕಾದು ನೋಡೋಣ ಎಂದು ಮಾರ್ಮಿಕವಾಗಿ ನುಡಿದರು. ಸಚಿವ ಜಿ.ಟಿ.ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ಜಿ.ಟಿ.ದೇವೇಗೌಡರು ಹೇಳಿರುವುದು ಸತ್ಯ. ಪ್ರತಾಪ ಸಿಂಹ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next