ಮಂಡ್ಯ: ಸಂಸದೆ ಸುಮಲತಾ ರಾಜ್ಯ ರಾಜಕಾರಣಕ್ಕೆ ಬರುವ ಮುನ್ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ 7 ತಾಲೂಕಿನ ಬೆಂಬಲಿಗರ ಸಭೆ ನಡೆದಿದ್ದು, ರಾಜ್ಯ ರಾಜಕಾರಣಕ್ಕೆ ಬರುವಂತೆ ನಿರ್ಣಯ ಕೈಗೊಳ್ಳಲಾಗಿದೆ.
Advertisement
ಸುಮಲತಾ ಯಾವ ಪಕ್ಷಕ್ಕೆ ಸೇರಬೇಕು ಎನ್ನುವ ಗೊಂದಲ ಮುಂದುವರಿದಿದೆ.
ಮಂಗಳವಾರ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಶೇ. 50ರಷ್ಟು ಮಂದಿ ಬಿಜೆಪಿ ಕಡೆಗೂ ಇನ್ನುಳಿದ ಶೇ. 50ರಷ್ಟು ಮಂದಿ ಕಾಂಗ್ರೆಸ್ ಕಡೆಗೂ ಒಲವು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸುಮಲತಾ ಅವರ ನಡೆ ಕುರಿತು ಸಾಕಷ್ಟು ಕುತೂಹಲ ಗರಿಗೆದರಿದೆ.