Advertisement

ಬೆಂಗಳೂರು: ಕಳೆದ ಲೋಕಸಭಾ ಚುನಾ ವಣೆಯಲ್ಲಿ ಮಂಡ್ಯದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಬಿಜೆಪಿಗೆ ಬಾಹ್ಯ ಬೆಂಬಲ ಘೋಷಿಸಿದ್ದ ಸಂಸದೆ ಸುಮಲತಾ ಶುಕ್ರವಾರ ಅಧಿಕೃತವಾಗಿ ಬಿಜೆಪಿ ಸೇರಲಿದ್ದು, ಮಂಡ್ಯದಲ್ಲಿ ಬಿಜೆಪಿ- ಜೆಡಿಎಸ್‌ಮೈತ್ರಿ ಅಭ್ಯರ್ಥಿಯಾಗಿರುವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಬೆಂಬಲಿಸಲಿದ್ದಾರೆ.

Advertisement

ಶುಕ್ರವಾರ ಬೆಳಗ್ಗೆ 11.30ಕ್ಕೆ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಕ್ಷಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸುಮಲತಾ ಅವರನ್ನು ಬರ ಮಾಡಿಕೊಳ್ಳಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಸದಾನಂದ ಗೌಡ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ವಿಪಕ್ಷ ನಾಯಕ ಆರ್‌. ಅಶೋಕ್‌, ಮಾಜಿ ಸಚಿವರಾದ ಸಿ.ಟಿ. ರವಿ, ಡಾ| ಅಶ್ವತ್ಥನಾರಾಯಣ ಸಮ್ಮುಖದಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

ಜಾಲತಾಣದಲ್ಲಿ ಪೋಸ್ಟ್‌ ತಮ್ಮ ಎಕ್ಸ್‌ ಮತ್ತು ಫೇಸ್‌ಬುಕ್‌ ಖಾತೆಗಳಲ್ಲಿ ಪ್ರಧಾನಿ ಮೋದಿ ಅವಣರೊಂದಿಗಿನ ಭಾವಚಿತ್ರ ಪೋಸ್ಟ್‌ ಮಾಡಿರುವ ಸುಮಲತಾ, ಮಂಡ್ಯದ ಅಭಿವೃದ್ಧಿಯನ್ನೇ ಮೂಲಮಂತ್ರವಾಗಿಸಿಕೊಂಡು ಹಾಗೂ ಮೋದಿಯವರು ಮತ್ತೂಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಬಿಜೆಪಿಯನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಬಿಜೆಪಿ ನಾಯಕರ ಸಮ್ಮುಖದಲ್ಲಿ ಎ. 5ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆ ಆಗುತ್ತಿರುವೆ ಎಂದಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next