Advertisement

ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ ವಾರಂಟ್‌, ರಾಘವೇಶ್ವರ ಶ್ರೀಗೆ ಸಮನ್ಸ್‌

11:25 AM Oct 06, 2018 | Team Udayavani |

ಪುತ್ತೂರು: ಶ್ಯಾಮ ಶಾಸ್ತ್ರೀ ಶೂಟೌಟ್‌ ಪ್ರಕರಣದ ಅಂತಿಮ ದೋಷಾರೋಪಣ ಪಟ್ಟಿಯ ಆಧಾರ ದಲ್ಲಿ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಹಾಗೂ ಬೋನಂತಾಯ ಶಿವಶಂಕರ ಭಟ್‌ ಅವರಿಗೆ ಪುತ್ತೂರು ಪ್ರಧಾನ ಹಿರಿಯ ವ್ಯಾವಹಾರಿಕ ನ್ಯಾಯಾಲಯ ವಾರಂಟ್‌ ಜಾರಿ ಮಾಡಿದೆ.

Advertisement

ಪ್ರಕರಣದ ಇನ್ನೋರ್ವ ಆರೋಪಿ ಎಂದು ಗುರುತಿಸಿರುವ  ಶ್ರೀ ರಾಮ ಚಂದ್ರಾಪುರ ಮಠದ  ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಸಮನ್ಸ್‌ ಜಾರಿ ಮಾಡಿದೆ. ಈ ವಿಚಾರಣೆಯನ್ನು ಅಕ್ಟೋಬರ್‌ 31ರಂದು ನಡೆಸಲಿದ್ದು, ಆ ದಿನ ನ್ಯಾಯಾಲಯಕ್ಕೆ ಹಾಜ ರಾಗುವಂತೆ ತಿಳಿಸಿದೆ.

ರಾಘವೇಶ್ವರ ಸ್ವಾಮೀಜಿ ವಿರುದ್ಧ ಅತ್ಯಾಚಾರದ ಆರೋಪ ಮಾಡಿರುವ ಪ್ರೇಮಲತಾ ಅವರ ಪತಿ ದಿವಾಕರ ಶಾಸ್ತ್ರೀ  ಅವರ ಸಹೋದರ ಶ್ಯಾಮ್‌ ಪ್ರಸಾದ್‌ ಶಾಸ್ತ್ರೀ ಅವರು 2014ರ ಆ.31ರಂದು ಮಧ್ಯಾಹ್ನ 1.30ರ ಸುಮಾರಿಗೆ ಕೋವಿಯಿಂದ ಗುಂಡು ಹಾರಿಸಿಕೊಂಡಿದ್ದರು. ಇದರ ಬಗ್ಗೆ ಶ್ಯಾಮ್‌ ಶಾಸ್ತ್ರೀ ಅವರ ಪತ್ನಿ ನಗರ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು.

ಅನಂತರದ ಬೆಳವಣಿಗೆಯಲ್ಲಿ ಸಿಐಡಿ ಪೊಲೀಸರು ತನಿಖೆಯನ್ನು ಮುಂದುವರಿಸಿ, ಸೆ. 26ರಂದು ಅಂತಿಮ ದೋಷಾರೋಪಣ ಪಟ್ಟಿಯನ್ನು ಪುತ್ತೂರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದರಲ್ಲಿರುವಂತೆ ರಾಘವೇಶ್ವರ ಭಾರತೀ ಸ್ವಾಮೀಜಿ, ಕಲ್ಲಡ್ಕ ಡಾ| ಪ್ರಭಾಕರ ಭಟ್‌, ಬೋನಂತಾಯ ಶಿವಶಂಕರ ಭಟ್‌ ಅವರು ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾರೆ ಎಂದು ಉಲ್ಲೇಖೀಸಲಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ  ವಾರಂಟ್‌ ಹಾಗೂ ಸಮನ್ಸ್‌ ಜಾರಿ ಮಾಡಿ ಆದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next