ನವದೆಹಲಿ: ಖ್ಯಾತ ಪರಿಸರವಾದಿ, ಚಿಪ್ಕೊ ಚಳವಳಿ ಮುಖಂಡ ಮತ್ತು ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಸುಂದರ್ ಲಾಲ್ ಬಹುಗುಣ್(94ವರ್ಷ) ಅವರು ಕೋವಿಡ್ 19 ಸೋಂಕಿನಿಂದ ಶುಕ್ರವಾರ(ಮೇ 21) ರಿಷಿಕೇಶದ ಏಮ್ಸ್ ನಲ್ಲಿ ನಿಧನರಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ಸಮಯದಲ್ಲಿ ಅಧಿಕಾರಿಗಳ ಮೋಜು-ಮಸ್ತಿ: ಕಾರು-ಜೀಪುಗಳನ್ನು ತಡೆದು ಗ್ರಾಮಸ್ಥರ ಆಕ್ರೋಶ
ಖ್ಯಾತ ಪರಿಸರವಾದಿ ಸುಂದರ್ ಲಾಲ್ ಬಹುಗುಣ್ ಅವರು ತನಗೆ ಜ್ವರ ಬಂದಿರುವುದಾಗಿ ಹೇಳಿದ ನಂತರ ಕುಟುಂಬದ ಸದಸ್ಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಪರೀಕ್ಷೆಯ ನಂತರ ಕೋವಿಡ್ 19 ಪಾಸಿಟಿವ್ ವರದಿ ಬಂದಿರುವುದಾಗಿ ವರದಿ ಹೇಳಿದೆ.
ಆಸ್ಪತ್ರೆಯಲ್ಲಿ ಬಹುಗುಣ್ ಅವರಿಗೆ ಚಿಕಿತ್ಸೆ ನೀಡಿದ್ದು, ಅದು ಫಲಕಾರಿಯಾಗದೆ ವಿಧಿವಶರಾಗಿರುವುದಾಗಿ ವರದಿ ವಿವರಿಸಿದೆ. ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2,59,591 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 4,209 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆಗೊಳಿಸಿದ ಅಂಕಿಅಂಶದಲ್ಲಿ ತಿಳಿಸಿತ್ತು.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 30,27,925ಕ್ಕೆ ಹೆಚ್ಚಳವಾಗಿದೆ ಎಂದು ಸಚಿವಾಲಯ ತಿಳಿಸಿದೆ.