Advertisement
ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರವಿವಾರ ಬೆಳಿಗ್ಗೆಯಿಂದಲೇ ಬಹುತೇಕ ಎಲ್ಲ ವ್ಯಾಪಾರ-ವ್ಯವಹಾರ ಬಂದ್ ಆಗಿತ್ತು. ರಸ್ತೆಯಲ್ಲಿ ಜನ ಸಂಚಾರ, ಸಾರಿಗೆ ಬಸ್, ಖಾಸಗಿ ವಾಹನಗಳ ಸಂಚಾರವೂ ಸಂಪೂರ್ಣ ಬಂದ್ ಆಗಿತ್ತು. ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ಪೊಲೀಸರು ಕರ್ಫ್ಯೂ ನಿಯಮ ಪಾಲನೆಗಾಗಿ ನಿರತರಾಗಿದ್ದರು. ಹಾಲು, ತರಕಾರಿಯಂತಹ ಅವಶ್ಯಕ ವಸ್ತುಗಳ ಅಂಗಡಿಗಳು ಮಾತ್ರ ಬೆಳಿಗ್ಗೆ 9 ಗಂಟೆ ವರೆಗೆ ತೆರೆದಿದ್ದವು. ನಗರದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಿದ್ದರು. ಈ ನಡುವೆ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ದಂಡ ಹಾಕಿ ಬಿಸಿ ಮುಟ್ಟಿಸಿದರು.
Advertisement
ಲಾಕ್‌ಡೌನ್: ರವಿವಾರ ಜಿಲ್ಲೆ ಸಂಪೂರ್ಣ ಸ್ತಬ್ಧ
10:31 AM Jul 27, 2020 | Suhan S |
Advertisement
Udayavani is now on Telegram. Click here to join our channel and stay updated with the latest news.