Advertisement

ಇಂದು ಲಾಕ್‌ಡೌನ್‌: ಜಿಲ್ಲಾದ್ಯಂತ 144 ಕಲಂ ಜಾರಿ

08:58 AM Jul 05, 2020 | Suhan S |

ರಾಯಚೂರು: ಮಹಾಮಾರಿ ಕೋವಿಡ್ ವೈರಸ್‌ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಜು.5ರಂದು ರವಿವಾರ ಲಾಕ್‌ಡೌನ್‌ ಇರಲಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 144 ಕಲಂ ಜಾರಿಗೊಳಿಸಿ, ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

Advertisement

ಕೋವಿಡ್ ಸೋಂಕು ನಿಯಂತ್ರಿಸಲು ರಾಜ್ಯ ಸರರ್ಕಾರದ ಆದೇಶದಂತೆ 144 ಕಲಂ ಜಾರಿಗೊಳಿಸಲಾಗಿದೆ. ನಾಲ್ಕಕ್ಕಿಂತ ಹೆಚ್ಚು ಜನರು ತಿರುಗಾಡುವಂತಿಲ್ಲ, ಗುಂಪು ಗುಂಪಾಗಿ ಕಂಡು ಬಂದಲ್ಲಿ ತಮ್ಮ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದ್ದಾರೆ. 10 ಡಿಎಆರ್‌ ತುಕಡಿ, 500 ಪೊಲೀಸ್‌ ಪೇದೆಗಳು, 40 ಪಿಎಸ್‌ಐ, 10 ಸಿಪಿಐ, 4 ಡಿವೈಎಸ್‌ಪಿ ಮತ್ತು ಇಬ್ಬರು ಎಸ್‌ಪಿ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮದ್ಯ ಮಾರಾಟ ನಿಷೇಧ: ಜು.5ರಂದು ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಮದ್ಯ ಮಾರಾಟ ಮತ್ತು ಸಾಗಣೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಆದೇಶಿಸಿದ್ದಾರೆ. ಅಬಕಾರಿ ಕಾಯ್ದೆ 1965 ರ ಕಲಂ.21(1) ರಂತೆ ಜಿಲ್ಲಾದ್ಯಂತ ಮುಂದಿನ ನಾಲ್ಕು ರವಿವಾರಗಳಂದು ಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲಾಗುತ್ತಿದೆ. ಜಿಲ್ಲಾದಂತ್ಯ ರಾತ್ರಿ 8ರಿಂದ ಮರುದಿನ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8ರವರೆಗೆ ಎಲ್ಲ ಮಾರಾಟ ಮಳಿಗೆಗಳನ್ನು ಮುಚ್ಚಬೇಕು. ಅಗತ್ಯ ವಸ್ತುಗಳು ಹೊರತಾಗಿಸಿ ಬೇರಾವುದೇ ಅಂಗಡಿ ಮುಂಗಟ್ಟುಗಳನ್ನು= ತೆಗೆಯುವಂತಿಲ್ಲ. ಈ ಅವಧಿಯಲ್ಲಿ ಹೊರಗಿನಿಂದ ಮದ್ಯ ಇತ್ಯಾದಿಗಳನ್ನು ತಂದು ಮಾರುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next