Advertisement

ರವಿವಾರದ ರಾಶಿಫಲ; ಇಲ್ಲಿವೆ ನಿಮ್ಮ ಗ್ರಹಬಲ

07:08 AM Nov 20, 2022 | Team Udayavani |

ಮೇಷ: ದೈರ್ಯ ಸಾಹಸ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಚರ್ಚೆಗೆ ಅವಕಾಶ ಮಾಡದಿರಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ವಾಹನ ಭೂಮಿ ಆಸ್ತಿ ವಿಚಾರಾದಿಗಳಲ್ಲಿ ಅಭಿವೃದ್ಧಿಯ ಬದಲಾವಣೆ.

Advertisement

ವೃಷಭ: ಸ್ಥಿರ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಸ್ಥಾನಮಾನ ಗೌರವಾದಿಗಳು ಸಂಭವಿಸುವುವು. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿ. ಮಾತಿನಲ್ಲಿ ತಾಳ್ಮೆ ಇರಲಿ. ಗೃಹೋಪಕರಣ ವಸ್ತುಗಳ ಸಂಗ್ರಹ.

ಮಿಥುನ: ಜವಾಬ್ದಾರಿಯುತವಾದ ಉದ್ಯೋಗ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರು ಹಿರಿಯರಿಂದ ಸರಿಯಾದ ಮಾರ್ಗದರ್ಶನ. ಗೃಹದಲ್ಲಿ ಸಂತಸದ ವಾತಾವರಣ. ಅಧ್ಯಯನಶೀಲರಿಗೆ ವಿಪುಲ ಅವಕಾಶ.

ಕರ್ಕ: ಅತಿಯಾದ ಆತ್ಮವಿಶ್ವಾಸ ಸಲ್ಲದು. ಮಾತನಾಡುವಾಗ ಎಚ್ಚರ ವಹಿಸಿ. ದಾಂಪತ್ಯದಲ್ಲಿ ಸಹನೆ ಇರಲಿ. ಧಾರ್ಮಿಕ ವಿಚಾರದಲ್ಲಿ ಭಕ್ತಿ ಶ್ರದ್ಧೆ ಕೊರತೆಯಾಗದಂತೆ ಕಾರ್ಯ ನಿರ್ವಹಿಸಿ. ಧನಾರ್ಜನೆ ಉತ್ತಮ. ಗುರುಹಿರಿಯರಲ್ಲಿ ಬೇಸರ ಮಾಡದಿರಿ.

ಸಿಂಹ: ಅತಿಯಾದ ಕಾರ್ಯ ಒತ್ತಡದಿಂದ ದೇಹಾಯಾಸ ತೋರೀತು. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಧನಾರ್ಜನೆ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳು ಪರರನ್ನು ಅವಲಂಬಿಸದಿರಿ.

Advertisement

ಕನ್ಯಾ: ಆರೋಗ್ಯ ವೃದ್ಧಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ ಸಂಭವ. ಧನಾರ್ಜನೆಗಿಂತಲೂ ಅಧಿಕ ವ್ಯಯದ ಪರಿಸ್ಥಿತಿ. ಉದ್ಯೋಗ ವ್ಯವಹಾರಗಳಲ್ಲಿ ಸಮಾದಾನ ತೃಪ್ತಿ. ಪಾಲುದಾರಿಕಾ ಕ್ಷೇತ್ರದವರಿಗೆ ಸದಾವಕಾಶ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಿಂದ ಅಧಿಕ ಧನಾರ್ಜನೆ. ಉತ್ತಮ ವಾಕ್‌ ಚತುರತೆ. ಮನೆಯಲ್ಲಿ ಸಂತಸದ ವಾತಾವರಣ. ಗುರುಹಿರಿಯರಿಗೆ ಹೆಚ್ಚಿನ ಜವಾಬ್ದಾರಿ.

ವೃಶ್ಚಿಕ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಸಲ್ಲದು. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಗೃಹೋಪಕರಣ ಸಂಗ್ರಹ.

ಧನು: ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ಸಾಂಸಾರಿಕ ಸುಖ ಮಧ್ಯಮ. ವಿದ್ಯಾರ್ಥಿಗಳು ಪರರ ಸಹಾಯ ಪಡೆದು ನಿರೀಕ್ಷಿತ ಗುರಿ ಸಾಧಿಸಿರಿ. ಹಿರಿಯರ ಆರೋಗ್ಯ ಗಮನಿಸಿ.

ಮಕರ: ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರೊಂದಿಗೆ ಸಂಭ್ರಮದ ವಾತಾವರಣ. ದೂರದ ಮಿತ್ರರೊಂದಿಗೆ ಸಮಾಲೋಚನೆ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಉತ್ತಮ ಧನ ಸಂಪಾದನೆ.

ಕುಂಭ: ಆರೋಗ್ಯ ಗಮನಿಸಿ. ದೈಹಿಕ ಶ್ರಮ. ಅಧಿಕ ಬುದ್ಧಿವಂತಿಕೆ ಚುರುಕುತನದ ಪ್ರದರ್ಶನ. ಜನಾನುರಾಗಿ ವರ್ತನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಪರಿಶ್ರಮಕ್ಕೆ ತಕ್ಕ ಉತ್ತಮ ಪ್ರತಿಫ‌ಲ ಗಳಿಸುವ ಯೋಗ. ಕೆಲಸ ಕಾರ್ಯಗಳಲ್ಲಿ ಸ್ಪಷ್ಟನೆ.

ಮೀನ: ನಿರೀಕ್ಷಿತ ಸ್ಥಾನ ಗೌರವ ದೊರಕಿದ ಸಂತೋಷ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಮಕ್ಕಳಿಂದ ಸಂತೋಷ ವೃದ್ಧಿ. ಉತ್ತಮ ಗುಣನಡತೆಯಿಂದ ಜನಾದಾರ ಗೌರವ ಪ್ರಾಪ್ತಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next