Advertisement
ರಾಮನಗರದಲ್ಲಿ ರೇಷ್ಮೆಗೂಡು ಮಾರುಕಟ್ಟೆ, ಎಪಿಎಂಸಿ ಮಾರುಕಟ್ಟೆ, ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಅವಶ್ಯಕ ವಸ್ತುಗಳ ಅಂಗಡಿಗಳು, ಪೆಟ್ರೋಲ್ ಬಂಕ್‌ಗಳು ಮಾತ್ರ ತೆರೆದಿದ್ದವು. ಬೆಂಗಳೂರು ಮೈಸೂರುಡಿ ರಾಷ್ಟ್ರೀಯ ಹೆದ್ದಾರಿ ಬಿಕೋ ಎನ್ನುತ್ತಿತ್ತು. ಆದರೆ ನಗರ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಕಡಿವಾಣ ಇರಲಿಲ್ಲ. ಕೆಲವು ಕಡೆ ಪೊಲೀಸರು ವಿನಾಕಾರಣ ಅಲೆದಾಡದಿರುವಂತೆ ಎಚ್ಚರಿ ಸಿದ್ದು ಕಂಡು ಬಂತು. ರಾಮನಗರ ತಾಲೂಕಿನ ಬಿಡದಿ ಪಟ್ಟಣದಲ್ಲಿ ಕೂಡ ಲಾಕ್‌ಡೌನ್ ಯಶಸ್ವಿಯಾಯಿತು.
ಕನಕಪುರ: ಕೋವಿಡ್-19 ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊರಡಿಸಿರುವ ಭಾನುವಾರದ ಲಾಕ್‌ಡೌನ್‌ಗೆ ತಾಲೂಕಿನ ಜನತೆಯಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಮತ್ತು ಸಾವು ನೋವು ದಿನೆದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿವಾರ ಶನಿವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ 5 ರವರೆಗೆ ಕರ್ಫ್ಯೂ ಜಾರಿಯಾಗಿದೆ. ಅಗತ್ಯ ವಸ್ತು ಹೊರತುಪಡಿಸಿ ಉಳಿದಂತೆ ಎಲ್ಲ ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.
Related Articles
Advertisement
ಬಾರ್‌ಗಳು ಬಾಗಿಲು ಮುಚ್ಚಿದ್ದು, ಈ ಎಲ್ಲ ಸೇವೆಗಳು ಸೋಮವಾರದವರೆಗೂ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರ ಓಡಾಟವಿಲ್ಲದೆ ನಗರ ಸಂಪೂರ್ಣ ಬಿಕೋ ಎನ್ನುತ್ತಿತ್ತು. ಉಳಿದಂತೆ ಅಗತ್ಯ ವಸ್ತುಗಳಾದ ದಿನಸಿ ಹಾಲು ತರಕಾರಿ ಮಾಂಸದ ಅಂಗಡಿ ಔಷಧ ಮಳಿಗೆ, ಆಸ್ಪತ್ರೆಗಳ ಸೇವೆಗೆ ಅವಕಾಶ ಕಲ್ಪಿಸಿದ್ದು, ಹೋಟೆಲ್‌ಗಳು ಪಾರ್ಸೆಲ್ ಸೇವೆ ಎಂದಿನಂತೆ ಕಾರ್ಯ ನಿರ್ವಹಿಸಿದವು. ಕೆಲವು ವಾಹನ ಸವಾರರು ಅನಗತ್ಯವಾಗಿ ಓಡಾಟ ಕಂಡು ಬಂತು ಒಟ್ಟಾರೆಯಾಗಿ ರಾಜ್ಯ ಸರ್ಕಾರ ಲಾಕ್‌ಡೌನ್ ಆದೇಶಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಲಾಕ್‌ಡೌನ್ ಬುಹುತೇಕ ಯಶಸ್ವಿಯಾಗಿದೆ.