ದುಬೈ: ಐಸಿಸಿ ಟಿ20 ವಿಶ್ವಕಪ್ ನ ಮೊದಲ ಪಂದ್ಯದಲ್ಲಿ ಸೋಲನುಭವಿಸಿದ ಟೀಂ ಇಂಡಿಯಾ ಮುಂದಿನ ನ್ಯೂಜಿಲ್ಯಾಂಡ್ ವಿರುದ್ಧ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ರವಿವಾರ ಕೇನ್ ವಿಲಿಯಮ್ಸನ್ ಪಡೆಯನ್ನು ವಿರಾಟ್ ಪಡೆ ಎದುರಿಸಲಿದೆ.
ಮಾಜಿ ಆಟಗಾರ ಸುನೀಲ್ ಗಾವಸ್ಕರ್ ಅವರು ಟೀಂ ಇಂಡಿಯಾದ ಆಡುವ ಬಳಗದ ಕುರಿತಾಗಿ ಮಾತನಾಡಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧ ಗೆಲ್ಲಬೇಕಾದರೆ ತಂಡದಲ್ಲಿ ಎರಡು ಬದಲಾವಣೆ ಮಾಡಬೇಕು ಎಂದು ಗಾವಸ್ಕರ್ ಹೇಳಿದ್ದಾರೆ.
ಬೌಲಿಂಗ್ ಮಾಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಫಾರ್ಮ್ ನಲ್ಲಿರದ ಬೌಲರ್ ಭುವನೇಶ್ವರ್ ಕುಮಾರ್ ಅವರ ಬದಲಿಗೆ ಇಶಾನ್ ಕಿಶನ್ ಮತ್ತು ಶಾರ್ದೂಲ್ ಠಾಕೂರ್ ಗೆ ಅವಕಾಶ ಕೊಡಬೇಕು ಎಂದು ಗಾವಸ್ಕರ್ ಹೇಳಿದ್ದಾರೆ.
ಇದನ್ನೂ ಓದಿ:‘ಲವ್ ಯು ರಚ್ಚು’ ಹಾಡಿಗೆ ‘ಸಿದ್ಧ್ ಶ್ರೀರಾಮ್’ ಧ್ವನಿ
ಪಾಕ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವುದಿಲ್ಲವಾದರೆ ಅವರ ಬದಲು ಇಶಾನ್ ಕಿಶನ್ ಆಡಿಸಿ. ಇಶಾನ್ ಸದ್ಯ ಉತ್ತಮ ಫಾರ್ಮ್ ನಲ್ಲಿದ್ದಾರೆ. ಭುವನೇಶ್ವರ್ ಕುಮಾರ್ ಬದಲಿಗೆ ಶಾರ್ದೂಲ್ ಠಾಕೂರ್ ರನ್ನು ಆಡಿಸಬಹುದು. ಆದರೆ ನೀವು ತಂಡದಲ್ಲಿ ಹೆಚ್ಚು ಬದಲಾವಣೆ ಮಾಡಿದರೆ ನೀವು ಹೆಚ್ಚು ಗಾಬರಿಯಾಗಿದ್ದೀರಿ ಎಂಬ ಸಂದೇಶವೂ ಎದುರಾಳಿಗೆ ರವಾನೆಯಾಗುತ್ತದೆ ಎಂದು ಗಾವಸ್ಕರ್ ಹೇಳಿದ್ದಾರೆ.