Advertisement

2023ರವರೆಗೆ ಸೌರವ್ ಗಂಗೂಲಿಯೇ ಬಿಸಿಸಿಐ ಅಧ್ಯಕ್ಷರಾಗಿರಬೇಕು: ಸುನೀಲ್ ಗಾವಸ್ಕರ್

03:24 PM Jul 26, 2020 | keerthan |

ಮುಂಬೈ; ಸೌರವ್ ಗಂಗೂಲಿ ಅವರೇ 2023ರ ಏಕದಿನ ವಿಶ್ವಕಪ್ ವರೆಗೆ ಬಿಸಿಸಿಐ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಮಾಜಿ ನಾಯಕ ಸುನೀಲ್ ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

Advertisement

ಈ ಶತಮಾನದಲ್ಲಿ ಆಪತ್ತಿನ ಸಮಯದಲ್ಲಿ ಭಾರತೀಯ ಕ್ರಿಕೆಟ್ ಅನ್ನು ಪುನರುಜ್ಜೀವನಗೊಳಿಸುವಲ್ಲಿ ಗಂಗೂಲಿ ಪಾತ್ರ ಮಹತ್ವವಾದದ್ದು. ಹೀಗಾಗಿ ಬಿಸಿಸಿಐ ಅನ್ನು ಮುನ್ನಡೆಸಲು ಗಂಗೂಲಿಯೇ ಉತ್ತಮ ಆಯ್ಕೆ ಎಂದು ಗಾವಸ್ಕರ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಬಿಸಿಸಿಐ ಅಧ್ಯಕ್ಷರಾಗಿ ಒಂದು ವರ್ಷ ಮಾತ್ರ ಅಧಿಕಾರವಿದೆ.

2023ರ ಏಕದಿನ ವಿಶ್ವಕಪ್ ಭಾರತದಲ್ಲೇ ನಡೆಯಲಿದೆ. ಹೀಗಾಗಿ ಸೌರವ್ ಗಂಗೂಲಿ ಅಧ್ಯಕ್ಷರಾಗಿ ಇದ್ದುಕೊಂಡು ಬಿಸಿಸಿಐ ಮುನ್ನಡೆಸಬೇಕು ಎನ್ನುವುದು ಸುನೀಲ್ ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಒಂದು ವೇಳೆ ಬಿಸಿಸಿಐ ಅಧ್ಯಕ್ಷ ಗಾದಿ ತಪ್ಪಿದರೆ ಐಸಿಸಿಯ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ಕಣ್ಣಿದ್ದಾರೆ ಎನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next