Advertisement

ಬಿಸಿಸಿಐ ಆಯ್ಕೆ ಸಮಿತಿಯ ನೂತನ ಸದಸ್ಯರಾಗಿ ಕನ್ನಡಿಗ ಸುನಿಲ್ ಜೋಶಿ ಆಯ್ಕೆ

09:03 AM Mar 05, 2020 | Hari Prasad |

ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬುಧವಾರದಂದು ಕ್ರಿಕೆಟ್ ಆಟಗಾರರ ಆಯ್ಕೆ ಸಮಿತಿಗೆ ನೂತನ ಸದಸ್ಯರನ್ನಾಗಿ ಕನ್ನಡಿಗ ಸುನಿಲ್ ಜೋಶಿ ಹಾಗೂ ಹರ್ವಿಂದರ್ ಸಿಂಗ್ ಅವರನ್ನು ಹೆಸರಿಸಿದೆ. ಇವರ ಹೆಸರನ್ನು ಮೂವರು ಸದಸ್ಯರ ಕ್ರಿಕೆಟ್ ಸಲಹೆಗಾರರ ಸಮಿತಿ ಶಿಫಾರಸು ಮಾಡಿತ್ತು.

Advertisement

ಮದನ್ ಲಾಲ್, ಆರ್.ಪಿ.ಸಿಂಗ್ ಮತ್ತು ಸುಲಕ್ಷಣ ನಾಯ್ಕ್ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ ಭಾರತ ಕ್ರಿಕೆಟ್ ತಂಡದ ಮಾಜೀ ಸ್ಪಿನ್ನರ್ ಅವರನ್ನು ಭಾರತೀಯ ಪುರುಷರ ಹಿರಿಯರ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸುವಂತೆ ಶಿಫಾರಸು ಮಾಡಿತ್ತು. ಸುನಿಲ್ ಜೋಶಿ ಅವರು ಎಂ.ಎಸ್.ಕೆ. ಪ್ರಸಾದ್ ಅವರಿಂದ ತೆರವಾಗಲಿರುವ ಸ್ಥಾನವನ್ನು ತುಂಬಲಿದ್ದಾರೆ.

ಸುನಿಲ್ ಜೋಶಿ ಅವರು 15 ಟೆಸ್ಟ್ ಹಾಗೂ 69 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. 1992 ರಿಂದ 2010ರವರೆಗೆ ದೇಶೀ ಕ್ರಿಕೆಟ್ ನಲ್ಲಿ ಆಟವಾಡಿದ್ದ ಎಡಗೈ ಸ್ಪಿನ್ನರ್ ಸುನಿಲ್ ಜೋಶಿ ಅವರು ಈ ಅವಧಿಯಲ್ಲಿ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 615 ವಿಕೆಟ್ ಗಳನ್ನು ಪಡೆದಿದ್ದಾರೆ. 199ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 6 ರನ್ನಿಗೆ 5 ವಿಕೆಟ್ ಪಡೆದಿರುವುದು ಸುನಿಲ್ ಜೋಶಿ ಅವರ ಅತ್ಯುತ್ತಮ ಸಾಧನೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next