Advertisement

ಸರ್ಕಾರಿ ಕಚೇರಿಗಳಿಂದಲೇ ಹೆಚ್ಚಿನ ವಿದ್ಯುತ್ ಬಿಲ್ ಬಾಕಿ : ಸುನಿಲ್ ಕುಮಾರ್

01:16 PM Sep 07, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಸರಕಾರಿ ಕಚೇರಿಗಳಿಂದಲೇ ಹೆಚ್ಚಿನ ವಿದ್ಯುತ್ ಬಿಲ್ ಬಾಕಿಯಾಗಿದ್ದು ಇದರಿಂದ ಸರಕಾರಕ್ಕೆ ಹೆಚ್ಚಿನ ಹೊರೆಯಾಗಿದೆ ಹಾಗಾಗಿ ವಿದ್ಯುತ್ ಬಳಕೆ ಮಾಡಿದರೆ ಬಿಲ್ ಕಟ್ಟುವುದು ಎಲ್ಲರಿಗೂ ಅನ್ವಯವಾಗಲಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

Advertisement

ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು ಎರಡು ಇಲಾಖೆಯಲ್ಲಿ ಒಂದಷ್ಟು ಯೋಚನೆ ಆರಂಭವಾಗಿದೆ. ಎಲ್ಲ ಇಲಾಖೆಗಳಲ್ಲಿ ತಯಾರಿ ಮಾಡಿಕೊಳ್ಳಲು ಸೂಚಿಸಿದ್ದೇನೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಎಲ್ಲ ಮನೆಗಳಿಗೆ ವಿದ್ಯುತ್ ನೀಡುವ ಬೆಳಕು ಯೋಜನೆ ಅಡಿಯಲ್ಲಿ ವಿದ್ಯುತ್ ಸಂಪರ್ಕಕ್ಕೆ ಯೋಚಿಸಲಾಗಿದೆ ಅದಕ್ಕಾಗಿ ಸ್ಥಳೀಯ ಸಂಸ್ಥೆಗಳಿಂದ ಎನ್ ಒ ಸಿ ಅಗತ್ಯವಿಲ್ಲ ಎಂದರು.

ರಾಜ್ಯದ ಎಲ್ಲ ಡಿವಿಜನಲ್ ಗಳಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಮಾಡಲು ತೀರ್ಮಾನಿಸಲಾಗಿದ್ದು. ಟಿಸಿ ಸುಟ್ಟರೆ 24 ಗಂಟೆಯಲ್ಲಿ ದುರಸ್ತಿ ಮಾಡಲಾಗುವುದು, ಗಂಗಾ ಕಲ್ಯಾಣದ ಯೋಜನೆಗಳಿಗೆ 30 ದಿನದಲ್ಲಿ ಸಂಪರ್ಕ ನೀಡಲು ಸೂಚಿಸಲಾಗಿದೆ, ಅಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಪ್ರಿಪೇಡ್ ಮೀಟರ್ ಅಳವಡಿಕೆಗೆ ತೀರ್ಮಾನಿಸಲಾಗಿದೆ ಎಂದರು.
ಉತ್ತರ ಕರ್ನಾಕಟದ ಜಿಲ್ಲೆಗಳಲ್ಲಿ 7 ಗಂಟೆ ನಿರಂತರ ವಿದ್ಯುತ್ ನೀಡಲು ತೀರ್ಮಾನಿಸಿದೆ. ಅದಕ್ಕಾಗಿ 60ಕ್ಕೂ ಹೆಚ್ಚು ಸಬ್ ಸ್ಟೇಶನ್ ಮಾಡಲು ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ :ಭಾರತಕ್ಕೆ ಇಸ್ಲಾಂ ಎಂಬ ಪದವು ಆಕ್ರಮಣಕಾರರೊಂದಿಗೆ ಬಂದಿದ್ದು : ಮೋಹನ್ ಜಿ ಭಾಗವತ್

ಈಗಾಗಲೇ ರಾಜ್ಯದಲ್ಲಿ ಹೊಸ ನೇಮಕಾತಿಗಳ ಬಗ್ಗೆ ಸಾಕಷ್ಟು ಬೇಡಿಕೆ ದೂರು ಬಂದಿದ್ದು ಲೈನ್ ಮೆನ್, ಜೆಇ ನೇಮಕದ ಬಗ್ಗೆ ಬೇಡಿಕೆ ಇದೆ . ವರ್ಗಾವಣೆ ದಂಧೆಯನ್ನು ವರ್ಷಪೂರ್ತಿ ನಡೆಸುವುದನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

Advertisement

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವ ವ್ಯವಸ್ಥೆ ಕಡಿಮೆ ಮಾಡಲು ತೀರ್ಮಾನ. 100 ದಿನದಲ್ಲಿ ಕಲಾವಿದರ ಡಾಟಾ ಸಂಗ್ರಹ ಮಾಡಲು ತೀರ್ಮಾನಿಸಲಾಗಿದೆ. ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಇಲಾಖೆ ವತಿಯಿಂದ ನಡೆಸಲು ನಿರ್ಧರಿಸಲಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ನಡೆಸಲಾಗುವುದು ಎಂದರು .

Advertisement

Udayavani is now on Telegram. Click here to join our channel and stay updated with the latest news.

Next