Advertisement
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಎಲ್ಲ ಆಯಾಮ ಪರಿಶೀಲಿಸಿದಾಗ ನೀವು ಕೊಟ್ಟ ಉಚಿತ ವಿದ್ಯುತ್ ಭರವಸೆ ಈಡೇರಿಸುವುದಕ್ಕೆ ವಾರ್ಷಿಕ 9000 ಕೋಟಿ ರೂ ಬೇಕಾಗುತ್ತದೆ. ಅಂದರೆ ವಾರ್ಷಿಕವಾಗಿ ಮತ್ತೆ 9000 ಕೋಟಿ ಸಾಲದ ‘ಹೂಡಿಕೆ’ ಮಾಡುವ ಯೋಚನೆ ನಿಮ್ಮದಾಗಿದೆ. “ಭರವಸೆ ಉಚಿತ, ಸಾಲ ಖಚಿತ’ ಎಂಬ ಅರ್ಥನೀತಿಯನ್ನು ಸ್ವಲ್ಪ ಬದಲಾಯಿಸಿಕೊಳ್ಳಿ ಎಂದು ಟೀಕಿಸಿದ್ದಾರೆ.
Related Articles
Advertisement
ವಾಸ್ತವವನ್ನು ಮರೆ ಮಾಚುವುದಕ್ಕಾಗಿ ನೀವು ಸಾಲವನ್ನು ಬಂಡವಾಳ ಹೂಡಿಕೆ ಎಂದು ವ್ಯಾಖ್ಯಾನಿಸಿದ್ದೀರಿ. ಇಷ್ಟೊಂದು ಸಾಲ ಮಾಡಿದ ಮೇಲೆ ಹೊರೆ ಇಳಿಸಿದ್ದೇನೆ ಎಂದು ಬೆನ್ನು ತಟ್ಟಿಕೊಳ್ಳುವ ನಿಮ್ಮ ಜ್ಞಾನನಿಧಿಯ ಬಗ್ಗೆ ಸಾಮಾನ್ಯ ಪ್ರಜೆಯೂ ಸರ್ವಾಂಗಗಳಿಂದಲೂ ಕನಿಕರ ವ್ಯಕ್ತಪಡಿಸಬಹುದು. ಈ ಕಾರಣಕ್ಕಾಗಿಯೇ ನೀವು ಕತ್ತಲೆಯಲ್ಲಿ ಬಜೆಟ್ ಓದಿದ ಸಂಗತಿಯನ್ನು ನಾನು ನೆನಪಿಸಿದ್ದೇನೆ.ನುಡಿದಂತೆ ನಡೆಯುವವರು ನಾವು ಎಂದು ಅತಿಯಾಗಿ ಬೆನ್ನುತಟ್ಟಿಕೊಳ್ಳಬೇಡಿ. ನಿಮ್ಮ ನಡೆ-ನುಡಿಯೊಳಗಿನ ಕಾಪಟ್ಯ ಎಲ್ಲರಿಗೂ ಗೊತ್ತು. ಇದೇ ನನ್ನ ಕೊನೆಯ ಚುನಾವಣೆ ಎಂದು ಎಷ್ಟು ಬಾರಿ ನುಡಿದಿರಿ, ಎಷ್ಟು ಬಾರಿ ತಪ್ಪಿದಿರಿ? ರಾಜಕೀಯವಾಗಿ ಮರು ಜನ್ಮ ನೀಡಿದ ಬಾದಾಮಿಯನ್ನು ತ್ಯಜಿಸಿ ಕೋಲಾರಕ್ಕೆ ವಲಸೆ ಹೊರಟಿದ್ದೀರಿ. ಇದು ನುಡಿದಂತೆ ನಡೆಯುವ ಪರಿಯಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮ ಮಾತು, ಕೃತಿ ಒಂದು ರೀತಿಯಲ್ಲಿ “ಹಸ್ತಿ ದಂತ” ಇದ್ದಂತೆ. ಆನೆಗೆ ಇರುವುದು ಎರಡೇ ದಂತ ಎಂದು ಭಾವಿಸುವುದು ಎಷ್ಟು ಮೂರ್ಖತನವೋ, ಸಿದ್ದರಾಮಯ್ಯನವರ ನುಡಿಯಂತೆ ನಡೆ ಎಂಬುದು ಅಷ್ಟೇ ಅಪಾಯಕಾರಿ. ರೈತರ ಕೃಷಿ ಪಂಪ್ ಸೆಟ್‌ಗಳಿಗೆ ನೀಡಬೇಕಿದ್ದ ವಿದ್ಯುತ್ ಸಬ್ಸಿಡಿಯನ್ನೇ ಬಾಕಿ ಇಟ್ಟು ಹೋದ ಘನ ಸರ್ಕಾರ ತಮ್ಮದ್ದಾಗಿತ್ತು ಎಂಬುದನ್ನು ಮರೆಯದಿರಿ ಎಂದು ಕುಟುಕಿದ್ದಾರೆ.