ವಿಜಯಪುರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪಿ.ಸುನೀಲ ಕುಮಾರ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.
2012 ರ ಐ.ಎ.ಎಸ್ ಬ್ಯಾಚ್ ನ ಸುನೀಲ ಕುಮಾರ ಇಂಜಿನಿಯರಿಂಗ್ ಪದವೀಧರರು. 2002 ರಲ್ಲಿ ನ್ಯಾಶನಲ್ ಇನಸ್ಟಿಟ್ಯುಟ್ ಆಫ್ ಟೆಕ್ನಾಲಾಜಿ ವರಂಗಲ್, ಆಂದ್ರಪ್ರದೇಶದಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟಾನಿಕ್ಸ್ ಟಾಟಾ ಕನ್ಸಲ್ಟೆನ್ಸಿ ಸರ್ವಿಸನಲ್ಲಿ ಸಾಫ್ಟವೇರ್ ಇಂಜಿನೀಯರ್ ಆಗಿ 2002-09 ರವರೆಗೆ ಸೇವೆ ಸಲ್ಲಿಸಿದ್ದಾರೆ. ಅದೇ ಕಂಪನಿಯಲ್ಲಿ ಚೆನ್ನೈ 3 ವರ್ಷ, ಅಮೇರಿಕಾ ನ್ಯೂಜೆರ್ಸಿ ಯಲ್ಲಿ 4 ವರ್ಷ ಕಾರ್ಯ ನಿರ್ವಹಿಸಿದ್ದಾರೆ.
ನಂತರ 2012ರ ಐ.ಎ.ಎಸ್ ಬ್ಯಾಚ್‌ನಿಂದ ಆಯ್ಕೆಯಾಗಿ ನಂತರ ಹಾಸನ ಜಿಲ್ಲೆಯಲ್ಲಿ ಪ್ರೋಬೇಶನರಿ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಹೊಸಪೇಟೆ ಉಪ ವಿಭಾಗಾಧಿಕಾರಿ, ಯಾದಗಿರಿ ಜಿ.ಪಂ. ಸಿಇಓ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ, ಬೆಂಗಳೂರಿನಲ್ಲೂ ಸೇವೆ ಸಲ್ಲಿಸಿದ್ದಾರೆ.
ರಿಯಲ್ ರೆಗ್ಯೂಲೆಟರಿ ಆಥಾರಿಟಿ ಕಾರ್ಯದರ್ಶಿಯಾಗಿ, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಕರ್ನಾಟಕ ಮುನ್ಸಿಪಲ್ ಡೆಟಾ ಸೆಂಟರನ ಜಂಟಿ ನಿರ್ದೇಶಕರಾಗಿ, ಕೊಪ್ಪಳ ಜಿಲ್ಲಾಧಿಕಾರಿ, ನಂತರ ಬಿಬಿಎಂಪಿ ಉಪ ಆಯುಕ್ತರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ಅಧಿಕಾರ ವಹಿಸಿಕೊಂಡ ನಂತರ ಫ್ರಥಮ ಬಾರಿಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ತೀವ್ರಗತಿಯಲ್ಲಿ ಕೋವಿಡ್ ಸೋಂಕು ಹರಡುತ್ತಿದೆ. ಅಧಿಕಾರಿಗಳೊಂದಿಗೆ ಈ ಕುರಿತು ಕೂಲಂಕುಷ ಪರಿಶೀಲಿಸಿ, ಕೋವಿಡ್ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಆದ್ಯತೆ ನೀಡುತ್ತೇನೆ ಎಂದರು.
ಜಿ.ಪಂ. ಸಿಇಓ ಗೋವಿಂದರೆಡ್ಡಿ ಉಪಸ್ಥಿತರಿದ್ದರು.