Advertisement

‘ಗತವೈಭವ’ತೋರಿಸಲು ಸುನಿ ರೆಡಿ: ದುಷ್ಯಂತ್‌ ಗೆ ಹೀರೋ ಪಟ್ಟ

09:18 AM Mar 03, 2022 | Team Udayavani |

ಸುನಿ ನಿರ್ದೇಶನದಲ್ಲಿ ಮೂಡಿಬಂದ “ಸಖತ್‌’ ಚಿತ್ರ ಹಿಟ್‌ ಆಗಿದ್ದು, ಗೊತ್ತೇ ಇದೆ. ಈಗ ಸುನಿ ಮತ್ತೂಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಅದು “ಗತವೈಭವ’.

Advertisement

ಹೀಗೊಂದು ವಿಭಿನ್ನ ಶೀರ್ಷಿಕೆಯ ಚಿತ್ರ ಇತ್ತೀಚೆಗೆ ಆರಂಭವಾಗಿದ್ದು, ಮೊದಲ ಹಂತವಾಗಿ ಚಿತ್ರದ ಟೈಟಲ್‌ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರದ ಮೂಲಕ ನವನಟ ದುಷ್ಯಂತ್‌ ನಾಯಕರಾಗುತ್ತಿದ್ದಾರೆ.

ಹೀರೋ ಆಗುತ್ತಿರುವ ಬಗ್ಗೆ ಕಾರ್ಯಕ್ರಮದಲ್ಲಿ ಮಾತನಾಡಿದ ದುಷ್ಯಂತ್‌, “ನಾನು ಮೂಲತಃ ತುಮಕೂರಿನವನು. ವಿದೇಶದಲ್ಲಿ ಎಲ್‌ಎಲ್‌ಬಿ ಓದಿದ್ದೇನೆ. ಆದರೆ ಅಭಿನಯದಲ್ಲಿ ಆಸಕ್ತಿ ಹೆಚ್ಚು . ಮೊದಲು ನಾನು ಅಪ್ಪು ಅವರನ್ನು ನೆನೆಯುತ್ತೇನೆ. ಈ ಚಿತ್ರದ ಟೀಸರ್‌ ಕಳೆದ ವರ್ಷ ಸಿದ್ಧವಾಗಿತ್ತು. ಮೊದಲು ನಾವು ತೋರಿಸಿದ್ದೆ ಅಪ್ಪು ಅವರಿಗೆ. ಚಿತ್ರರಂಗಕ್ಕೆ ಬರುವವರಿಗೆ ಕಾಲೆಳೆಯುವವರೆ ಹೆಚ್ಚು. ಆದರೆ ನಿನಗೆ ಒಳ್ಳೆಯ ಭವಿಷ್ಯವಿದೆ. ಚಿತ್ರದಲ್ಲಿ ನಟಿಸು ಎಂದಿದ್ದರು ಅಪ್ಪು. ಅವರ ಮಾತುಗಳು ನನಗೆ ಸ್ಪೂರ್ತಿ. ನಮ್ಮದು ಸಂಪ್ರದಾಯಸ್ಥರ ಕುಟುಂಬ. ಸಿನಿಮಾದಲ್ಲಿ ನಟಿಸುವುದು ನನ್ನ ತಂದೆ, ತಾಯಿಗೆ ಇಷ್ಟವಿರಲಿಲ್ಲ. ಕೊನೆಗೆ ತಾಯಿಯನ್ನು ಒಪ್ಪಿಸಿದೆ. ತಂದೆ ಈಗಲೂ ಪೂರ್ಣ ಒಪ್ಪಿಗೆ ನೀಡಿಲ್ಲ. ನಾನು ವಿದೇಶದಲ್ಲಿ ಓದುತ್ತಿದ್ದಾಗ ದಿನ ಕನ್ನಡಿ ಮುಂದೆ ನಿಂತು ನಟನಂತೆ ಅಭಿನಯಿಸುತ್ತಿದ್ದೆ. ನಂತರ ಅಭಿನಯಕ್ಕೆ ಬೇಕಾದ ತರಬೇತಿ ಪಡೆದೆ. ನನ್ನ ಸ್ನೇಹಿತರೊಬ್ಬರ ಮೂಲಕ ಸುನಿ ಅವರ ಪರಿಚಯವಾಯಿತು. ಕಥೆ ಸಿದ್ದವಾಯಿತು. ನಿರ್ಮಾಪಕರ ಹುಡುಕಾಟ ಆರಂಭವಾಯಿತು’ ಎಂದರು ದುಶ್ಯಂತ್‌.

ಇದನ್ನೂ ಓದಿ:ದಾಳಿಗೆ “ಸರ್ವಾಧಿಕಾರಿ’ ಬೆಲೆ ತೆರಲೇಬೇಕು! ಅಮೆರಿಕ ಸಂಸತ್‌ನಲ್ಲಿ ಬೈಡೆನ್‌ ಭಾಷಣ

ತಮ್ಮ ಮಗ ಹೀರೋ ಆಗುತ್ತಿರುವ ಬಗ್ಗೆ ಮಾತನಾಡಿದ ಗುಬ್ಬಿ ಶಾಸಕ ಶ್ರೀನಿವಾಸ್‌, “ನಾವು ರಾಜಕೀಯ ವ್ಯಕ್ತಿಗಳು ನಿಮಗಿಂತ ಚೆನ್ನಾಗಿ ನಟನೆ ಮಾಡುತ್ತೇವೆ. ಆದರೆ ನಾನು ನನ್ನ ಮಗನನ್ನು ಬೆಳೆಸಿದ ರೀತಿಯ ಬೇರೆ. ಅವನ ಆಯ್ಕೆಯೇ ಬೇರೆ. ಚುನಾವಣೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡುವ ನನಗೆ ಸಿನಿಮಾ ನಿರ್ಮಾಣ ದೊಡ್ಡ ವಿಷಯವಲ್ಲ. ಆದರೆ ನನಗಿಷ್ಟವಿಲ್ಲದ ಕೆಲಸಕ್ಕೆ ನಾನು ಕೊಡಲ್ಲ. ಈ ಚಿತ್ರತಂಡ ನೋಡಿದರೆ ಸಂತೋಷವಾಗುತ್ತಿದೆ. ನನ್ನ ಮಗನಿಂದ ಒಳ್ಳೆಯದು ಆಗದಿದ್ದರೂ ಪರವಾಗಿಲ್ಲ, ಯಾರಿಗೂ ಕೆಟ್ಟದಾಗುವುದು ಬೇಡ’ ಎಂದರು ಶ್ರೀನಿವಾಸ್‌.

Advertisement

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಸುನಿ, “ಗತವೈಭವ ಎಂದರೆ ಗತಿಸಿ ಹೋದ ವೈಭವ ಎಂದು. ಈ ನಮ್ಮ ಚಿತ್ರದಲ್ಲಿ ವಾಸ್ಕೋಡಿಗಾಮನ ಕಥೆ ಸೇರಿದಂತೆ ಕೆಲವು ಐತಿಹಾಸಿಕ ಸನ್ನಿವೇಶಗಳಿರುತ್ತದೆ. ಫ‌ನ್‌, ಸೆಂಟಿಮೆಂಟ್‌ ಹಾಗೂ ಮೈಂಡ್‌ ಗೇಮ್‌ನ ಮಿಶ್ರಣ ಅನ್ನಬಹುದು. ದುಶ್ಯಂತ್‌ ಗೆ ಸ್ಟೇಜ್‌ ಫಿಯರ್‌ ಇಲ್ಲ. ಟೀಸರ್‌ ನಲ್ಲಿ ಆತನ ಅಭಿನಯಕ್ಕೆ ಹಾಗೂ ಧ್ವನಿಗೆ ಹೆಚ್ಚಿನ ಪ್ರಶಂಸೆ ವ್ಯಕ್ತವಾಗಿದೆ. ಏಪ್ರಿಲ್‌ ಕೊನೆಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದರು ಸುನಿ.

ಈ ಚಿತ್ರವನ್ನು ದೀಪಕ್‌ ತಿಮ್ಮಪ್ಪ ನಿರ್ಮಿಸುತ್ತಿದ್ದು, ಇವರಿಗೆ ಸುನಿ ಕೈ ಜೋಡಿಸಿದ್ದಾರೆ. ಚಿತ್ರಕ್ಕೆ ವಿಲಿಯಂ ಡೇವಿಡ್‌ ಛಾಯಾಗ್ರಹಣ, ಭರತ್‌ ಬಿ.ಜೆ ಸಂಗೀತವಿದೆ.

Advertisement

Udayavani is now on Telegram. Click here to join our channel and stay updated with the latest news.

Next