ಸಿಂಪಲ್ ಸುನಿ ನಿರ್ದೇಶನದ “ಒಂದು ಸರಳ ಪ್ರೇಮಕಥೆ’ ಚಿತ್ರೀಕರಣ ಪೂರ್ಣಗೊಂಡಿದೆ. ಇತ್ತೀಚೆಗೆ ನಟ ರಾಘವೇಂದ್ರ ರಾಜ್‌ಕುಮಾರ್ ನಟಿಸುವ ದೃಶ್ಯವೊಂದನ್ನು ಚಿತ್ರೀಕರಿಸಿಕೊಳ್ಳುವ ಮೂಲಕ ಚಿತ್ರತಂಡ ಚಿತ್ರೀಕರಣಕ್ಕೆ ತೆರೆ ಎಳೆದಿದೆ. ವಿನಯ್ ರಾಜ್‌ಕುಮಾರ್ ಈ ಚಿತ್ರದ ನಾಯಕ.
ನಿರ್ದೇಶಕ ಸುನಿ ಮಾತನಾಡಿ, ಟೈಟಲ್ ಹೇಳುವಂತೆ ಇದೊಂದು ಸರಳ ಪ್ರೇಮಕಥೆ. ಸಂಗೀತ ನಿರ್ದೇಶಕನ ಪ್ರೇಮಕಥೆಯಾಗಿರುವುದರಿಂದ ಸಂಗೀತಮಯ ಜರ್ನಿ. ಒಟ್ಟು ಸಿನಿಮಾದಲ್ಲಿ 11 ಸಾಂಗ್‌ಗಳು ಇವೆ. ಎಲ್ಲಾ ಪ್ರಕಾರದ ಸಂಗೀತಗಳು ಹಾಡಿನಲ್ಲಿದೆ. ಖುಷಿ ವಿಷಯ ಏನಂದರೆ ಮೊದಲ ದಿನ ವಿನಯ್ ಅವರ ಚಿತ್ರೀಕರಣ ಮಾಡಿದೆ. ಕೊನೆಯ ದಿನ ರಾಘಣ್ಣ ಅವರು ಚಿತ್ರೀಕರಣ ಮಾಡಿದ್ದೇನೆ. ದೊಡ್ಮನೆ ಕುಟುಂಬದ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ಒಟ್ಟು 83 ದಿನ ಶೂಟ್ ನಡೆಸಿದ್ದೇವೆ. ಮುಂಬೈ, ರಾಜಸ್ತಾನ, ಬೆಂಗಳೂರು, ಮೈಸೂರಿನಲ್ಲಿ ಚಿತ್ರೀಕರಣ ಮಾಡಿದ್ದೇನೆ ಎಂದು ಮಾಹಿತಿ ನೀಡಿದರು.
ರಾಘಣ್ಣ ಮಾತನಾಡಿ, ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಸಿನಿಮಾ ನೋಡಿದ ಮೇಲಿಂದ ಸುನಿ ಅವರ ಸಿನಿಮಾಗಳಲ್ಲಿ ನಟಿಸಬೇಕು ಎನಿಸಿತ್ತು. ನನ್ನ ಮಗ ನಟಿಸುತ್ತಿದ್ದೇನೆ ಎಂದಾಗ ದೊಡ್ಡ ವಿಷಯ ಎನಿಸಿತು. ನನಗೆ ಟೈಟಲ್ ತುಂಬಾ ಇಷ್ಟವಾಯಿತು. ಸಂಗೀತ ಅಂದರೆ ಏಳು ಸ್ವರಗಳು ಇರುತ್ತವೆ. ನನ್ನ ಒಂದು ಸ್ವರವಾಗಿ ಸೇರಿಸಿಕೊಂಡಿದ್ದಾರೆ. ಅದು ನನಗೆ ಸಂತೋಷ ಕೊಡುತ್ತದೆ. ಕುಂಬಳಕಾಯಿ ಹೊಡೆದಿದ್ದಾರೆ ಎಂದರು.
ನಟ ವಿನಯ್ ರಾಜ್‌ಕುಮಾರ್ ಮಾತನಾಡಿ, ಒಂದು ಸರಳ ಪ್ರೇಮಕಥೆ ಸಿನಿಮಾದಲ್ಲಿ ನಟಿಸಿದ ಅನುಭವ ತುಂಬಾ ಚೆನ್ನಾಗಿತ್ತು. ಶೂಟಿಂಗ್‌ಗೆ ಯಾವುದೇ ತೊಂದರೆ ಆಗದಂತೆ ನಿರ್ಮಾಪಕರಾದ ರಮೇಶ್ ಅವರು ಮಾಡಿಕೊಟ್ಟರು. ಸುನಿ ಅವರ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಸುನಿ ಅವರಂತೂ ಒಬ್ಬ ಕಲಾವಿದನಿಗೆ ನಟಿಸಲು ತುಂಬಾ ಸಹಕಾರ ನೀಡುತ್ತಾರೆ ಎಂದರು.
ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತವಿದೆ. “ಈ ಸಿನಿಮಾದಲ್ಲಿ 11 ಹಾಡುಗಳಿವೆ. ಸಿನಿಮಾದ ನಡುವೆ ಚಿಕ್ಕ ಚಿಕ್ಕ ಬೀಟ್ ಬರುತ್ತದೆ. 2 ಗಂಟೆ 20 ನಿಮಿಷ ಸಿನಿಮಾದಲ್ಲಿ ಮ್ಯೂಸಿಕ್ ಜೊತೆ ಕನೆಕ್ಟ್ ಆಗುತ್ತದೆ ಎಂದರು.
ನಿರ್ಮಾಪಕರಾದ ಮೈಸೂರು ರಮೇಶ್ ಮಾತನಾಡಿ, ನಾನು ಪುಣ್ಯವಂತ. ಕನ್ನಡ ಚಿತ್ರರಂಗದಲ್ಲಿ ಯಾರೇ ಏನೇ ಮಾಡಬೇಕು ಎಂದರೆ ದೊಡ್ಮನೆ ಆಶೀರ್ವಾದ ಬೇಕು. ನನ್ನ ಸಿನಿಮಾದಲ್ಲಿ ರಾಘಣ್ಣ ಹಾಗೂ ವಿನಯ್ ಅವರು ನಟಿಸಿರುವುದು ಖುಷಿ ಕೊಟ್ಟಿದೆ. ಈ ಸಿನಿಮಾವನ್ನು ತುಂಬಾ ಪ್ರೀತಿಯಿಂದ ಮಾಡಿದ್ದೇನೆ ಎಂದರು.
ಸ್ವಾತಿಷ್ಠ ಕೃಷ್ಣನ್, ಮಲ್ಲಿಕಾ ಸಿಂಗ್ ಈ ಚಿತ್ರದ ನಾಯಕಿಯರು. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲದ್ದಾರೆ