Advertisement
ಘಟನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯಿಂದ ಎಸ್ಪಿ ಕಚೇರಿಯಲ್ಲಿ ದೂರು ದಾಖಲಿಸಲಾಗಿದೆ.ಕಳೆದ ರವಿವಾರ ಶಿವಮೊಗ್ಗದಲ್ಲಿ ನಡೆದ ಟಿಇಟಿ ಪರೀಕ್ಷೆ ವೇಳೆ ಹಾಜರಾದ ಮಹಿಳಾ ಅಭ್ಯರ್ಥಿಯ ಹಾಲ್ ಟಿಕೆಟ್ ನಲ್ಲಿ ಅಶ್ಲೀಲಾ ಫೋಟೋ ಕಾಣಿಸಿಕೊಂಡಿದೆ, ಇದನ್ನು ಗಮನಿಸಿದ ಎನ್ ಇಎಸ್ ನ ರುದ್ರಪ್ಪ ಕಾಲೇಜು ಪ್ರಾಂಶುಪಾಲ ಚನ್ನಪ್ಪ ಅವರು ಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ, ಈ ಪ್ರಕರಣವನ್ನು ಸಿಇಎನ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಪ್ರಕರಣ ಸಂಬಂಧ ಮಾತನಾಡಿದ ಎಸ್ಪಿ ಮಿಥುನ್ ಕುಮಾರ್ ಮಾತನಾಡಿ ಟಿಇಟಿ ಹಾಲ್ ಟಿಕೆಟ್ ನಲ್ಲಿ ಅಭ್ಯರ್ಥಿ ಬದಲು ಅಶ್ಲೀಲ ಫೋಟೊ ಅಪ್ಲೋಡ್ ಆಗಿದೆ, ಈ ಕುರಿತು ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ, ದೂರು ಆಧರಿಸಿ ಈಗಾಗಲೇ ತನಿಖೆ ಆರಂಭಿಸಿದ್ದೇವೆ ಎಂದು ಹೇಳಿದ್ದಾರೆ.