Advertisement

Delhi: ಸರಕಾರಿ ಆಸ್ಪತ್ರೆಗಳಿಗೆ ನಕಲಿ ಔಷಧಗಳ ಪೂರೈಕೆ: CBI ತನಿಖೆಗೆ ಆದೇಶ

12:39 AM Dec 24, 2023 | Team Udayavani |

ಹೊಸದಿಲ್ಲಿ: ದಿಲ್ಲಿ ಸರಕಾರಿ ಆಸ್ಪತ್ರೆಗಳಿಗೆ ನಕಲಿ ಔಷಧಗಳ ಪೂರೈಕೆಗೆ ಸಂಬಂಧಿಸಿ ದಿಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೆನಾ ಅವರು ಸಿಬಿಐ ತನಿಖೆಗೆ ಆದೇಶಿಸಿದ್ದಾರೆ. ಸರಕಾರಿ ಆಸ್ಪತ್ರೆಗಳಿಗೆ ಪ್ರಮಾಣಿತವಲ್ಲದ ಔಷಧಗಳ ಪೂರೈಕೆ ಆಗಿದೆ ಎಂಬ ಆರೋಪ ಕೇಳಿಬಂದಿದೆ.

Advertisement

ಲಕ್ಷಾಂತರ ರೋಗಿಗಳಿಗೆ ಈ ಔಷಧಗಳನ್ನು ನೀಡಲಾಗಿದೆ. ಈ ಔಷಧ ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುವ ಸಾಧ್ಯತೆ ಇದೆ ಎಂದು ದಿಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಅವರ ಅಧಿಕೃತ ನಿವಾಸ “ರಾಜ್‌ನಿವಾಸ್‌’ನ ಅಧಿಕಾರಿಗಳು ಹೇಳಿದ್ದಾರೆ. ಹಗರಣ ಸಂಬಂಧ ದಿಲ್ಲಿ ಆರೋಗ್ಯ ಸಚಿವರ ವಜಾಕ್ಕೆ ಬಿಜೆಪಿ ಆಗ್ರಹಿಸಿದೆ. “ಔಷಧಗಳ ಖರೀದಿ ಸಂಬಂಧ ಈ ಹಿಂದೆಯೇ ಆಡಿಟ್‌ಗೆ ಸೂಚಿಸಿದ್ದೇನೆ. ಆದರೆ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರಕರಣ ಸಂಬಂಧ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದಿಲ್ಲಿ ಆರೋಗ್ಯ ಸಚಿವ ಸೌರಭ್‌ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next