Advertisement
ಭಾರತೀಯ ಆಹಾರ ನಿಗಮದ ಕರ್ನಾಟಕ ಪ್ರದೇಶವು ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮತ್ತು ಸಾಮಾನ್ಯ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಅಡಿಯಲ್ಲಿ ರಾಜ್ಯದ ಅಗತ್ಯತೆಗಳನ್ನು ಪೂರೈಸಲು ಇದುವರೆಗೆ ಪ್ರತಿದಿನ 7.48 ಲಕ್ಷ ಚೀಲಗಳನ್ನು ಸ್ವೀಕೃತಿ ವಿತರಣೆಯನ್ನು ಮಾಡಿದೆ. ಇದೇ ಅವಧಿಯಲ್ಲಿ, ಎನ್‌ಎಫ್‌ಎಸ್‌ಎ ಅಡಿಯಲ್ಲಿ ರಾಜ್ಯ ಸರ್ಕಾರವು 2.54 ಎಲ್ ಎಂಟಿ ಆಹಾರ ಧಾನ್ಯಗಳನ್ನು ಸಹ ಎತ್ತುವಳಿ ಮಾಡಿದೆ. ವಿವಿಧ ಯೋಜನೆಗಳ ಅಡಿಯಲ್ಲಿ
ವಿತರಣೆಗಾಗಿ ಲಾಕ್ ಡೌನ್ ಅವಧಿಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಪೂರೈಸಿದ ಒಟ್ಟು ಆಹಾರ ಧಾನ್ಯಗಳ ಪ್ರಮಾಣ 8.51 ಲಕ್ಷ ಮೆಟ್ರಿಕ್ ಟನ್ ಎಂದು ಹೇಳಿದ್ದಾರೆ .