Advertisement
ಕಾಪು ಪುರಸಭಾ ವ್ಯಾಪ್ತಿಯ ಕರಾವಳಿ ವಾರ್ಡ್, ಪೊಲಿಪುಗುಡ್ಡೆ, ಭಾರತ್‌ನಗರ, ಕಲ್ಯ, ದಂಡತೀರ್ಥ, ಕೋತಲಕಟ್ಟೆ, ಕೈಪುಂಜಾಲು, ಕಾಪು ಪರಿಸರದಲ್ಲಿ ಮತಯಾಚನೆ ನಡೆಸಿ, ಜೇಸಿ ಭವನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಈವರೆಗೂ ನಾನು ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿರದೇ, ಜಾತಿಯ ಪರಿಮಿತಿಯಲ್ಲದೇ ಎಲ್ಲಾ ವರ್ಗಗಳ ಜನರ ಭಾವನೆಗಳಿಗೂ ಸ್ಪಂಧಿಸಿಕೊಂಡು ಬಂದಿದ್ದೇನೆ. ಕ್ಷೇತ್ರದ ಪ್ರತೀಯೊಬ್ಬ ಮತದಾರರ ಆಶೋತ್ತರಗಳಿಗೆ ಸ್ಪಂಧಿಸುವ ಗುರಿಯೊಂದಿಗೆ ಚುನಾವಣಾ ಕಣದಲ್ಲಿದ್ದೇನೆ. ತಾವೆಲ್ಲರೂ ಬೆಂಬಲಿಸಿ, ಗೆಲ್ಲಿಸುವಿರೆಂಬ ವಿಶ್ವಾಸವಿದೆ ಎಂದರು.
Related Articles
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ವೃತ್ತಿಯಲ್ಲಿ ಉದ್ಯಮಿಯಾಗಿ, ಪ್ರವೃತ್ತಿಯಲ್ಲಿ ಸಮಾಜ ಸೇವಕರಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಪರ್ಯಾಯವಾಗುವ ವ್ಯಕ್ತಿ ಬೇರೊಬ್ಬರಿಲ್ಲ. ಸಮಾಜ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡುಪಾಗಿಟ್ಟುಕೊಂಡಿರುವ ಸುರೇಶ್ ಶೆಟ್ಟಿ ಅವರನ್ನು ಪಕ್ಷ ಅಭ್ಯರ್ಥಿಯನ್ನಾಗಿ ಘೋಷಿಸುವ ಮೂಲಕ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಅವರನ್ನು ಬಹುಮತದಿಂದ ಆರಿಸಿ, ವಿಧಾನಸಭೆಗೆ ಕಳುಹಿಸುವ ಮೂಲಕ ಕಾಪು ಕ್ಷೇತ್ರದ ಗೌರವವನ್ನು ಎತ್ತಿಹಿಡಿಯೋಣ. ಅದಕ್ಕಾಗಿ ನಾವು ನಿರಂತರವಾಗಿ ಶ್ರಮಿಸೋಣ ಎಂದರು.
Advertisement
ಬಿಜೆಪಿ ಅಭ್ಯರ್ಥಿ ಪ್ರಮುಖ್ ಗಂಗಾಧರ ಸುವರ್ಣ, ಕಾಪು ಪುರಸಭಾ ವ್ಯಾಪ್ತಿ ಮಹಾಶಕ್ತಿ ಕೆಂದ್ರದ ಅಧ್ಯಕ್ಷ ಸಂದೀಪ್ ಶೆಟ್ಟಿ ಕನ್ಯಾನಗುತ್ತು, ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಕಿರಣ್ ಆಳ್ವ, ರತ್ನಾಕರ ಶೆಟ್ಟಿ, ಸುರೇಶ್ ದೇವಾಡಿಗ, ಲತಾ ದೇವಾಡಿಗ, ಮಾಜಿ ಸದಸ್ಯರಾದ ರಮೇಶ್ ಹೆಗ್ಡೆ, ಗುಲಾಬಿ ಪಾಲನ್, ಪ್ರದೀಪ್ ಯು., ಪಕ್ಷದ ಮುಖಂಡರಾದ ರಮಾ ವೈ. ಶೆಟ್ಟಿ, ಮೋಹನ್ ಕಲ್ಯ, ನರೇಶ್ ಕೈಪುಂಜಾಲು, ರಮೇಶ್ ಪೂಜಾರಿ, ಚಂದ್ರಹಾಸ ಶೆಟ್ಟಿ, ರಂಜಿತ್ ದೇವಾಡಿಗ, ಸುನಿಲ್ ಮಡಿವಾಳ, ಅಶೋಕ್ ಶೆಟ್ಟಿ, ಪೂರ್ಣಿಮಾ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.
ಸರಕಾರದ ಅಭಿವೃದ್ಧಿ ಕೆಲಸಗಳು ಗೆಲುವಿಗೆ ಪೂರಕ : ಲಾಲಾಜಿ ಆರ್. ಮೆಂಡನ್ಪಡುಬಿದ್ರಿ : ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಸೋಮವಾರ ಮುದರಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು, ಕಾಪು ಕ್ಷೇತ್ರದಲ್ಲಿ ಹಿಂದಿಗಿಂತಲೂ ಅದ್ಬುತ ರೀತಿಯಲ್ಲಿ ಬಿಜೆಪಿಗೆ ಜನ ಬೆಂಬಲ ವ್ಯಕ್ತವಾಗುತ್ತಿದೆ. ಎಲ್ಲಾ ಕಡೆಗಳಲ್ಲೂ ನಾವು ನಡೆಸಿರುವ ಅಭಿವೃದ್ಧಿ ಕೆಲಸಗಳು ಮಾತನಾಡುತ್ತಿವೆ. ಇನ್ನಷ್ಟು ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸುತ್ತೇವೆ ಎಂದು ಜನ ಹೇಳುತ್ತಿದ್ದು ಇದು ಕಾಂಗ್ರೆಸಿಗರ ಹತಾಶೆಗೆ ಕಾರಣವಾಗುತ್ತಿದೆ. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚಿನ ಮತಗಳೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಗೆಲ್ಲಿಸುವ ಹೊಣೆ ಹೊರಬೇಕಿದೆ. ಇನ್ನುಳಿದ ಅಲ್ಪ ದಿನಗಳು ನಿರ್ಣಾಯಕ ದಿನಗಳಾಗಿದ್ದು ಯಾವುದೇ ಕ್ಷಣದಲ್ಲೂ ಮೈಮರೆಯದೇ ಪಕ್ಷ ಮತ್ತು ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕಿದೆ ಎಂದರು. ಪಕ್ಷದ ಮುಖಂಡರಾದ ಶಿವರಾಮ ಭಂಡಾರಿ, ರವೀಂದ್ರ ಪ್ರಭು, ಸಚಿನ್ ಮುದರಂಗಡಿ, ಉದಯ್ ಮೊದಲಾದವರು ಜತೆಗಿದ್ದರು.