Advertisement
ವಿಧಾನಸೌಧದಲ್ಲಿ ಇಂದು ಸಂಜೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಅವರು ತಿಳಿಸಿದರು.
Related Articles
Advertisement
ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೇ ಮತ ಹಾಕುತ್ತೇವೆ ಎಂದು ಅವರು ತಿಳಿಸಿದರು.
ಫೋಟೊ ವಿಡಿಯೋ ಬಗ್ಗೆ ಹೆದರಿಕೆ ಯಾಕೆ?
ಸರಕಾರಿ ಕಚೇರಿಯಲ್ಲಿ ಫೋಟೋ, ವಿಡಿಯೋ ನಿಷೇಧ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಂಡೆಪ್ಪ ಕಾಶೆಂಪೂರ್ ಅವರು, ನಾವು ಸರಿಯಾಗಿದ್ದರೆ ಫೋಟೊ ವಿಡಿಯೋಗೆ ಯಾಕೆ ಹೆದರಬೇಕು? ಹೀಗೆ ನಿಷೇಧ ಮಾಡಿದ್ರೆ 40% ಆರೋಪ ನಿಜ ಆಗುತ್ತದೆ. ಸರಕಾರ ಪಾರದರ್ಶಕವಾಗಿ ಇದ್ದರೆ ಭಯ ಯಾಕೆ? ಆ ಆದೇಶವನ್ನು ಕೂಡಲೇ ಸರಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಜನತಾಮಿತ್ರ ಸಮಾವೇಶ ಮುಂದಕ್ಕೆ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಇದೇ ತಿಂಗಳು ೧೭ರಂದರ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದ ʼಜನತಾಮಿತ್ರʼ ಕಾರ್ಯಕ್ರಮವನ್ನು 10 ದಿನಗಳ ಕಾಲ ಮುಂದೂಡಲಾಗಿದೆ ಎಂದು ಅವರು ಬಂಡೆಪ್ಪ ಅವರು ತಿಳಿಸಿದರು.
ಸಿದ್ದರಾಮೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕಾಶೆಂಪೂರ್ ಅವರು, ನಾವು ಜನರ ಉತ್ಸವ ಮಾಡುತ್ತೇವೆ. ಪಕ್ಷ ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಅಂತ ನಾವು ತೋರಿಸಿದ್ದೇವೆ. ನೀರಾವರಿ ವಿಚಾರದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಆದರೆ ಇವತ್ತು ಸುರಿಯುತ್ತಿರುವ ಮಳೆ ನೀರು ಸಮುದ್ರದ ಪಾಲಾಗುತ್ತಿದೆ. ನಮ್ಮ ದೃಷ್ಟಿ ಜನರ ಕಡೆಗೆ. ಹೀಗಾಗಿ ನಾವು ಯಾವುದೇ ಉತ್ಸವ ಮಾಡುವುದಿಲ್ಲ. ನಾವು ಜನರ ಉತ್ಸವ ಮಾಡಿದ್ದೇವೆ. ನಾವು ವಯಕ್ತಿಕ ಉತ್ಸವ ಮಾಡುವುದಿಲ್ಲ. ಜನರಿಗೆ ನಾವು ಏನು ಮಾಡುತ್ತೇವೆ ಎಂಬುದನ್ನು ಹೇಳಿ ಜನರ ಮುಂದೆ ಹೋಗುತ್ತೇವೆ” ಎಂದು ಹೇಳಿದರು.
ಬಿಜೆಪಿಯವರಿಗೆ ಗಾಬರಿ
ಡಿಸೆಂಬರ್ ನಲ್ಲಿ ಎಲೆಕ್ಷನ್ ಆಗಬಹುದು ಎಂದು ಹೇಳುತ್ತಿದ್ದಾರೆ. ನಾವು ಚುನಾವಣಾ ತಯಾರಿಯಲ್ಲಿ ತೊಡಗಿದ್ದೇವೆ. ಬಿಜೆಪಿಯವರು ಗಾಬರಿಯಾಗಿ, ಎಲ್ಲೆಲ್ಲೂ ಹೋಗಿ ಸಭೆ ಮಾಡುತ್ತಿದ್ದಾರೆ. ನಮಗೆ ಗಾಬರಿ ಇಲ್ಲ, ಯಾಕೆಂದರೆ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನ ಮಾಡಿದ್ದಾರೆ. ಹಾಗಾಗಿ ಡಿಸೆಂಬರ್ ನಲ್ಲೇ ಚುನಾವಣೆ ಆಗಲಿ, ಯಾವಾಗಲೇ ಆದರೂ ಚುನಾವಣೆ ನಾವು ಸಿದ್ದರಿದ್ದೇವೆ ಎಂದು ಹೇಳಿದರು.
ಶಾಸಕರಾದ ನಾಗನಗೌಡ ಕುಂದನೂರು, ವೆಂಕಟರಾವ್ ನಾಡಗೌಡ, ಡಾ.ಕೆ.ಅನ್ನದಾನಿ, ಅಶ್ವಿನ್ ಕುಮಾರ್, ನಿಸರ್ಗ ನಾರಾಯಣಸ್ವಾಮಿ, ದೇವಾನಂದ ಚೌಹಾಣ್, ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ ಸೇರಿದಂತೆ ಹಲವು ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದರು.