Advertisement

KS ಈಶ್ವರಪ್ಪಗೆ ಬೆಂಬಲ: ಗೂಳಿಹಟ್ಟಿ ಶೇಖರ್‌

11:12 PM Mar 20, 2024 | Shreeram Nayak |

ಶಿವಮೊಗ್ಗ: ಬಂಡಾಯ ಅಭ್ಯರ್ಥಿ ಕೆ.ಎಸ್‌. ಈಶ್ವರಪ್ಪಗೆ ಮಾಜಿ ಸಚಿವ ಹಾಗೂ ಭೋವಿ ಸಮಾಜದ ಮುಖಂಡ ಗೂಳಿಹಟ್ಟಿ ಶೇಖರ್‌ ಬೆಂಬಲ ಘೋಷಿಸಿದ್ದಾರೆ.

Advertisement

ಬುಧವಾರ ಈಶ್ವರಪ್ಪ ಅವರ ಮನೆಗೆ ತೆರಳಿ, ನಿಮ್ಮ ನಿರ್ಧಾರಕ್ಕೆ ನನ್ನ ಬೆಂಬಲ ಇದೆ. ನಿಮ್ಮ ಪರ ಪ್ರಚಾರ ಮಾಡುತ್ತೇನೆ ಎಂದು ಈಶ್ವರಪ್ಪ ಅವರಿಗೆ ಭರವಸೆ ನೀಡಿದ್ದಾರೆ. ಅಲ್ಲದೇ ಈಶ್ವರಪ್ಪ ಚುನಾವಣೆ ಮುಗಿಯುವವರೆಗೆ ಕ್ಷೇತ್ರದಲ್ಲೇ ಇರುತ್ತೇನೆ.

ಹಿಂದೂ ಹುಲಿ ಈಶ್ವರಪ್ಪ ಅವರನ್ನು ಬೆಂಬಲಿಸುತ್ತೇನೆ. ಪಕ್ಷ ಶುದ್ಧೀಕರಣದ ಬಗ್ಗೆ ಅವರು ಧ್ವನಿ ಎತ್ತಿದ್ದಾರೆ. ಬಿಜೆಪಿ ಒಂದು ಕುಟುಂಬಕ್ಕೆ ಸೀಮಿತವಾಗಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ಬೆಂಬಲ ನೀಡುವುದು ನನ್ನ ಕರ್ತವ್ಯವಾಗಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next